ವಿಜಯವಾಣಿ ಸುದ್ದಿಜಾಲ ಮಡಿಕೇರಿ
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯನ್ನಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರನ್ನು ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇಮಕ ಮಾಡಿದ್ದಾರೆ. ಈ ಬಗ್ಗೆ ಮೈಸೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷೆ ಮಂಗಳ ಸೋಮಶೇಖರ್ ಅವರಿಗೆ ಆದೇಶ ಕಳುಹಿಸಲಾಗಿದೆ.