ಜಿಲ್ಲೆ

ಯೋಜನಾಬದ್ಧವಾಗಿ ಕಾರ್ಯಕ್ರಮ ರೂಪಿಸಿ

ಇಂದಿರಾ ಎನ್ ಕೆ

ಕುಂದಾಪುರ: ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಎಲ್ಲ ಕಾರ್ಯಕ್ರಮಗಳನ್ನು ಮತ್ತು ಚಟುವಟಿಕೆಗಳನ್ನು ಯೋಜನಾ ಬದ್ಧವಾಗಿ ನಿರ್ವಹಿಸಿ 90 ದಿನದಲ್ಲಿ ಕ್ಷೇತ್ರದ ಜನರಿಗೆ ಮುಟ್ಟುವ ರೀತಿಯಲ್ಲಿ ಕಾರ್ಯಕ್ರಮ ಮಾಡಬೇಕು ಎಂದು ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಹೇಳಿದರು. ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್‌ಕುಮಾರ್ ಶೆಟ್ಟಿ ಮಾತನಾಡಿ, ಸೆ.25ರಂದು ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆಯಂದು ಆರಂಭಗೊಂಡು ಡಿ.25 ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ತನಕ ಸುದೀರ್ಘ 90 ದಿನಗಳ ಕಾಲಆತ್ಮನಿರ್ಭರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿ ಜನರಿಗೆ ತಿಳಿಸಬೇಕು ಎಂದು ಹೇಳಿದರು. ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಉಪಾಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಮಂಡಲ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಆತ್ಮನಿರ್ಭರ ಭಾರತ ಸಹ ಸಂಚಾಲಕ ರಾಜೇಶ್ ಶೆಟ್ಟಿ, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಸ್ವಾಗತಿಸಿ, ನಿರೂಪಿಸಿದರು. ಸುನೀಲ್ ಶೆಟ್ಟಿ ಹೇರಿಕುದ್ರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್. ವಂದಿಸಿದರು.