ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ವಿವಿಧ ಯೋಜನೆಗಳಲ್ಲಿ ಹೆಚ್ಚಿನ ಗುರಿ ಸಾಧಿಸಲು ಸಂಸದ ಡಾ.ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಿ ವಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯು ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವಂತಹುದು. ಇದಕ್ಕೆ ಜಿಲ್ಲೆಯ 1640 ಗ್ರಾಮಗಳಿಗೆ ಕೇಂದ್ರ ಸರ್ಕಾರ 993 ಕೋಟಿ ರೂ. ಬಿಡುಗಡೆಗೊಳಿಸಿದೆ. ದೂರದಷ್ಟಿಯ ಮತ್ತು ಮಹತ್ವದ ಯೋಜನೆಗಳ ಅನುಷ್ಠಾನದ ವೇಗ ತೃಪ್ತಿಕರವಾಗಿಲ್ಲ. ಈಗಲಾದರೂ ಸುಧಾರಣೆ ಕಾಣಬೇಕು. ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ವಾನವ ದಿನಗಳ ಸೃಜನೆಯನ್ನು ಹೆಚ್ಚಿಸಬೇಕು ಎಂದರು.
ಮೊದಲಿನಿಂದಲೂ ಸರ್ಕಾರವು ಶಿಕ್ಷಣ, ಆರೋಗ್ಯ ಸೇರಿ ವಿವಿಧ ಕ್ಷೇತ್ರಗಳಿಗೆ ಅಗತ್ಯ ಮೂಲಸೌಕರ್ಯಕ್ಕೆ ಒತ್ತು ನೀಡುತ್ತಿದೆ. ರೈತರ ಆದಾಯ ದ್ವಿಗುಣಗೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸವಾಗುತ್ತಿದೆ ಎಂದರು.
ಈ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆ, ಶಾಶ್ವತ ನೀರಾವರಿ ಯೋಜನೆಗಳ ಅನುಷ್ಠಾನ, ದೇಶದಲ್ಲಿಯೇ ಚಿಕ್ಕಬಳ್ಳಾಪುರವನ್ನು ವಾದರಿಯ ಜಿಲ್ಲೆಯಾಗಿಸುವ ಬಗ್ಗೆ ಸಂಸದರು ಭರವಸೆ ನೀಡಿದರು.
ಸಂಸದ ಮಲ್ಲೇಶ್‌ಬಾಬು, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಉಪ ಕಾರ್ಯದರ್ಶಿ ಅತಿಕ್ ಪಾಷಾ, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ದಿಶಾ ಸಮಿತಿ ಸದಸ್ಯರಾದ ಶಿವಪ್ಪ, ವಿಕಾಸ್, ಎಸ್. ಬಿ.ಗಣೇಶ್ ರೆಡ್ಡಿ, ಲಲಿತಮ್ಮ, ಕೆ.ನಾಗಭೂಷಣ ರಾವ್, ಮಮತಾ, ಶಿವಕುವಾರ್, ಬಿ.ವಿ.ಕೃಷ್ಣ ಮತ್ತಿತರರು ಇದ್ದರು.
74,460 ರೈತರ ನೋಂದಣಿ
ಜಿಲ್ಲೆಯಲ್ಲಿ ಪ್ರಸ್ತುತ ಫಸಲ್‌ಬಿವಾ ಯೋಜನೆಯಡಿ 74,460 ರೈತರು ನೋಂದಾಯಿಸಿಕೊಂಡಿದ್ದಾರೆ. ಆದರೆ, ಈ ಭಾಗದಲ್ಲಿರುವ ಅನ್ನದಾತರ ಪ್ರಮಾಣಕ್ಕೆ ಹೋಲಿಸಿದ್ದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಸಾಧನೆ ತೋರಿಲ್ಲ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ಕಿಸಾನ್ ಸವ್ಮಾನ್ ಯೋಜನೆಯಡಿ ಜಿಲ್ಲೆಗೆ 17 ಕಂತುಗಳಲ್ಲಿ 361 ಕೋಟಿ ರೂ. ರೈತರ ಖಾತೆಗೆ ನೇರವಾಗಿ ವರ್ಗಾವಣೆಯಾಗಿದೆ. ರೈತರ ಸಂಖ್ಯೆಗೆ ಹೋಲಿಸಿದರೆ ಫಸಲ್‌ಬಿವಾ ಯೋಜನೆಗೆ ನೋಂದಾಯಿಸಿಕೊಂಡ ರೈತರ ಸಂಖ್ಯೆ ಕಡಿಮೆ ಇದೆ. ಇದರಿಂದ ಕೃಷಿ, ತೋಟಗಾರಿಕಾ ಇಲಾಖೆ ಹೆಚ್ಚಿನ ನೋಂದಣಿಗೆ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು.
ರಸ್ತೆ ವಿಸ್ತರಣೆ ಚರ್ಚೆ
ಜಿಕ್ಕಬಳ್ಳಾಪುರ ನಗರಸಭೆ ವಾರ್ಡ್ ನಂ.30ರ (ಶಿಡ್ಲಟ್ಟ ರಸ್ತೆ) ಬಳಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ರಸ್ತೆ ವಿಸ್ತರಣೆಯ ಅಭಿವೃದ್ಧಿ ಕಾಮಗಾರಿಗೆ ಇರುವ ತೊಡಕುಗಳನ್ನು ಚರ್ಚಿಸಲು ಜ.13ರಂದು ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮತ್ತು ಜಿಲ್ಲಾಡಳಿತದ ಅಧಿಕಾರಿಗಳನ್ನೊಳಗೊಂಡ ಸಭೆ ಆಯೋಜನೆಗೆ ತೀರ್ಮಾನಿಸಲಾಗಿದೆ ಎಂದು ಸಂಸದರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿವೆ 14 ಅಪಘಾತ ವಲಯ
ಬೆಂಗಳೂರು ಗ್ರಾವಾಂತರ ಜಿಲ್ಲೆಯ ದೇವನಹಳ್ಳಿ ಸಮೀಪದ ನಂದಿ ಉಪಚಾರ ಹೋಟೆಲ್ ಬಳಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿಯಲ್ಲಿ 14 ಅಪಘಾತ ವಲಯ ಗುರುತಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿತು. ಈ ಭಾಗದಲ್ಲಿ ಅಪಘಾತಗಳ ಪ್ರಮಾಣಕ್ಕೆ ಕಡಿವಾಣ ಹಾಕಲು ಹಲವು ಯುಕ್ತ ಕ್ರಮ ಕೈಗೊಳ್ಳಲು, ಸರ್ವೀಸ್ ರಸ್ತೆ ಅಭಿವೃದ್ಧಿ, ಸೂಚನಾ ಫಲಕಗಳ ಅಳವಡಿಕೆ ಸೇರಿ ವಿವಿಧ ವಿಚಾರಗಳ ಬಗ್ಗೆ ಸಲಹೆ ನೀಡಲಾಯಿತು.