ಗೊರೇಬಾಳ: ಗೃಹಲಕ್ಷ್ಮೀ ಯೋಜನೆಗೆ ನೊಂದಣಿಯಾಗಿರುವ ಫಲಾನುಭವಿಗಳಿಗೆ ದಿ.30-08-2023 ರಂದು ಬುಧವಾರ ಮೈಸೂರಿನಲ್ಲಿ ಯೋಜನೆಯನ್ನು ಮಾನ್ಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಲೋಕಾರ್ಪಣೆ ಗೊಳಿಸಲಿದ್ದು.
ಸದರಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಭಾಗಿಯಾಗಲು ಗ್ರಾಮದ ಶರಣಬಸವೇಶ್ವರರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನೇರ ಕಾರ್ಯಕ್ರಮ ವಿಕ್ಷಣೆಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರು, ಫಲಾನುಭವಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಮಾಜಿ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ ಮಟ್ಟದ ಶ್ರಮಜೀವಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರು,
ಉಪಾಧ್ಯಕ್ಷರು, ಸದಸ್ಯರು ಮತ್ತು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮಹಿಳಾ ಫಲಾನುಭವಿಗಳೊಂದಿಗೆ ಆಗಮಿಸಿ ಸಭೆ ಯಶಸ್ವಿ ಗೊಳಿಸ ಬೇಕೆಂದು ಗ್ರಾಮಪಂಚಾಯತ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.