ಜಿಲ್ಲೆ

ಗಿಡ ನೆಟ್ಟು ಪೋಷಿಸಿ, ಪರಿಸರ ರಕ್ಷಿಸಿ

ಉತ್ತರ ಕನ್ನಡ ಡೆಸ್ಕ್

ಶಿಗ್ಗಾಂವಿ: ತಾಲೂಕಿನ ಹೊಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ತಾಪಂ, ಶಿಕ್ಷಣ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ ಸಹಯೋಗದಲ್ಲಿ ಗಿಡ ನೆಟ್ಟು ಪೋಷಿಸುವ ಸಸ್ಯ ಶ್ಯಾಮಲ ಕಾರ್ಯಕ್ರಮ ಜರುಗಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಮಾತನಾಡಿ, ಮಕ್ಕಳಲ್ಲಿ ಪರಿಸರ ಪ್ರೀತಿ ಪಸರಿಸುವ ಮೂಲಕ ಸಸ್ಯ ಶ್ಯಾಮಲ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಅರಣ್ಯ ಇಲಾಖೆ ವತಿಯಿಂದ ಪರಿಸರಕ್ಕೆ ಉಪಯುಕ್ತವಾಗುವಂತಹ ಸಸಿಗಳನ್ನು ಒದಗಿಸಲಾಗುತ್ತಿದೆ. ಅವುಗಳನ್ನು ನೆಡುವ ಮೂಲಕ ಪೋಷಿಸಿ ಪರಿಸರ ರಕ್ಷಿಸಬೇಕು ಎಂದರು.

ತಹಸೀಲ್ದಾರ್ ಸಂತೋಷ ಹಿರೇಮಠ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ದಾವಲಸಾಬ್ ಹುಬ್ಬಳ್ಳಿ ಅಧ್ಯಕ್ಷತೆ ವಹಿಸಿದ್ದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಾಲಯ್ಯನಕೋಟೆ ವಿಶ್ವನಾಥ, ಗ್ರಾಪಂ ಅಧ್ಯಕ್ಷೆ ರಾಜೇಶ್ವರಿ ಲಮಾಣಿ, ಅಣ್ಣಪ್ಪ ಲಮಾಣಿ, ಸಾಮಾಜಿಕ ವಲಯ ಉಪ ಅರಣ್ಯ ಅಧಿಕಾರಿ ಮಂಜುನಾಥ, ಶಿಕ್ಷಕರು ಉಪಸ್ಥಿತರಿದ್ದರು.