ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಲಾಯಿತು.  
ಜಿಲ್ಲೆ

ಸಜೀಪ ಮೂಡದಲ್ಲಿ ಗಿಡ ವಿತರಣೆ

ಸೌಮ್ಯ ಆರ್

ಬಂಟ್ವಾಳ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಣೆಮಂಗಳೂರು ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸಜೀಪ ಮೂಡ ಘಟಕದ ವತಿಯಿಂದ ಸಜೀಪ ಮೂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ವಿತರಣೆ ನಡೆಯಿತು.

ಸಜೀಪಮೂಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಶೋಭಾ ಶೆಟ್ಟಿ, ಜನಜಾಗೃತಿ ವೇದಿಕೆ ವಲಯ ಅಧ್ಯಕ್ಷ ಶ್ರೀನಿವಾಸ್ ಪೂಜಾರಿ, ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಪಂಚಾಯತಿ ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ, ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ, ಮುಖ್ಯೋಪಾಧ್ಯಯಿನಿ ವತ್ಸಲಾ ಉಪಸ್ಥಿತರಿದ್ದರು.

ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಪರಿಸರ ಮಾಲಿನ್ಯದ ದುಷ್ಪರಿಣಾಮ ಬಗ್ಗೆ ಮಾಹಿತಿ ನೀಡಲಾಯಿತು. ಪರಿಸರಕ್ಕೆ ಸಂಬಂಧಿಸಿದ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನಿಸಲಾಯಿತು.

ಸೇವಾ ಪ್ರತಿನಿಧಿ ಬಬಿತಾ ಸ್ವಾಗತಿಸಿದರು. ಶಿಕ್ಷಕಿ ಜೆಸಿಂತಾ ಮೋರಸ್ ವಂದಿಸಿದರು. ವಲಯ ಮೇಲ್ವಿಚಾರಕಿ ಅಮಿತಾ ಕಾರ್ಯಕ್ರಮ ನಿರೂಪಿಸಿದರು.