ತರೀಕೆರೆ: ದೇಶದ ಅಭಿವೃದ್ಧಿಗೆ ಪಾಕೃತಿಕ ಸಂಪತ್ತು ಪ್ರಧಾನವಾಗಿದೆ. ಎಲ್ಲರೂ ಮನೆ ಮುಂದೆ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಟ್ಟು ಪೋಷಿಸಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಹಳಿಯೂರು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ಶನಿವಾರ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಜಾತಿಯ ಸಸಿ ನೆಟ್ಟು ಮಾತನಾಡಿದರು.
ಪರಿಸರದ ಮೇಲೆ ಅತಿಯಾದ ದಬ್ಬಾಳಿಕೆಯಿಂದ ಪ್ರಕೃತಿ ಮುನಿಸಿಕೊಳ್ಳುತ್ತಿದೆ. ಹೀಗಾಗಿ ಅನೇಕ ವಿಕೋಪಗಳನ್ನು ಎದುರಿಸುವಂತಾಗಿದೆ. ಪರಿಸರ ರಕ್ಷಣೆ ಮಾಡಿದರಷ್ಟೇ ಸಮೃದ್ಧ ಮಳೆ, ಬೆಳೆ ನಿರೀಕ್ಷಿಸಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪರಿಸರ ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ಡಾ. ಕೆ.ಜೆ.ಕಾಂತರಾಜ್ ಮಾತನಾಡಿ, ಪರಿಸರ ಅಸಮತೋಲನದಿಂದ ತಾಪಮಾನ ಹೆಚ್ಚಳವಾಗುತ್ತಿದೆ. ಇದರಿಂದ ಜನ ನಿರಂತರ ತೊಂದರೆ ಅನುಭವಿಸುವಂತಾಗಿದೆ. ಸಮಸ್ಯೆ ನಿವಾರಣೆಗೆ ಸಮೃದ್ಧವಾದ ಕಾಡು ಬೆಳೆಸುವುದು ಅನಿವಾರ್ಯ ಎಂದು ಹೇಳಿದರು.
ವನಮಹೋತ್ಸವದಲ್ಲಿ ಹಳಿಯೂರು ಸರ್ಕಾರಿ ಪ್ರೌಢಶಾಲೆ ಮಕ್ಕಳು ವಿವಿಧ ಜಾತಿಯ 500ಕ್ಕೂ ಹೆಚ್ಚು ಬೀಜದುಂಡೆ ತಯಾರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿದರು.
ಪುರಸಭೆ ಸದಸ್ಯ ಆರ್.ಕುಮಾರಪ್ಪ, ಆರ್‌ಎ್ಒಗಳಾದ ಆಸ್ಿ ಅಹ್ಮದ್, ರುಕೀಯ ಪರ್ವೀನ್, ಕಾಂಗ್ರೆಸ್ ಸೇವಾದಳದ ತಾಲೂಕು ಅಧ್ಯಕ್ಷ ಟಿ.ಎನ್.ಜಗದೀಶ್, ಮುಖ್ಯಶಿಕ್ಷಕ ಮಂಜುನಾಥ್, ಡಿಆರ್‌ಎ್ಒ ನವೀನ್, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲೋಕೇಶ್ ಇತರರಿದ್ದರು.