ಕುಷ್ಟಗಿಯ ಕೋರ್ಟ್ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಆರ್. ಮಂಜುನಾಥ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಚೌಳಗಿ ಇತರರಿದ್ದರು. 
ಜಿಲ್ಲೆ

ಗಿಡ-ಮರ ಬೆಳಸಿ ಉಳಿಸಿ

Kopala - Desk - Eraveni

ಕುಷ್ಟಗಿ: ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ ಎಂದು ಪಟ್ಟಣದ ಜಿಎಂಎಫ್‌ಸಿ ಕೋರ್ಟನ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಮಂಜುನಾಥ ಹೇಳಿದರು.

ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲರೂ ಜವಾಬ್ದಾರಿ ಅರಿತು ಗಿಡ-ಮರ ಬೆಳಸಿ ಉಳಿಸಬೇಕಿದೆ. ಪರಿಸರದ ಸಮತೋಲನದಿಂದ ಪ್ರಕೃತಿ ವಿಕೋಪದಂತಹ ಅವಘಡ ಸಂಭವಿಸುವುದಿಲ್ಲ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಎಲ್.ಪೂಜೇರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮಹಾಂತೇಶ ಚೌಳಗಿ, ವಕೀಲರ ಸಂಘದ ಅಧ್ಯಕ್ಷ ಎಸ್.ಜಿ. ಪಾಟೀಲ್, ಕಾರ್ಯದರ್ಶಿ ಆನಂದ ಡೊಳ್ಳಿನ್, ಸರ್ಕಾರಿ ಸಹಾಯಕ ಅಭಿಯೋಜಕರಾದ ಎಲ್.ರಾಯಣಗೌಡ, ಇಂದಿರಾ ಸುಹಾಸಿನಿ, ವಲಯ ಅರಣ್ಯಾಧಿಕಾರಿ ಶಿವರಾಜ ಮೇಟಿ, ಉಪವಲಯ ಅರಣ್ಯಾಧಿಕಾರಿಗಳಾದ ಅಬ್ದುಲ್ ಸಮಿ, ಮಂಜುನಾಥ, ಗುರುರಾಜ, ಗಸ್ತು ಅರಣ್ಯ ಪಾಲಕರಾದ ಶ್ರೀಧರ, ರಾಘವೇಂದ್ರ ಇತರರಿದ್ದರು.