ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಹಭಾಗಿತ್ವ ದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಅಕ್ಟೋಬರ್ 1 ರಂದು ಬೆಳಗ್ಗೆ 10ಕ್ಕೆ ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಆನಂದ್ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಅದಾನಿ ಗ್ರೂಪ್ ಅಧ್ಯಕ್ಷ ಕಿಶೋರ್ ಆಳ್ವ ವಿದ್ಯಾರ್ಥಿಗಳಿಗೆ ಬಟ್ಟೆ ಬ್ಯಾಗ್ ವಿತರಣೆ ಮಾಡಲಿದ್ದಾರೆ. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಬ್ರಾಯನ್ ಪಿಂಟೋ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಬಲ್ಮಠ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಜಗದೀಶ ಬಾಳ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.