ಹೂವಿನಹಡಗಲಿ: ರಸಭೆ ಅಧಿಕಾರಿಗಳು ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ಚೀಲ ಮತ್ತು ಉತ್ಪನ್ನಗಳನ್ನು ಮಂಗಳವಾರ ವಶಕ್ಕೆ ಪಡೆದರು.
ಪುರಸಭೆ ಮುಖ್ಯಾಧಿಕಾರಿ ಪಚ್ಚಿ ಮಲ್ಲೇಶ ಮಾತನಾಡಿ, ಪಟ್ಟಣದಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಪುರಸಭೆಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗಿದೆ. ಅನೇಕ ಬಾರಿ ಪಟ್ಟಣದ ಪ್ಲಾಸ್ಟಿಕ್ ಮಾರಾಟಗಾರರ ಗೋದಾಮು ಮತ್ತು ಅಂಗಡಿಗಳ ಮೇಲೆ ದಾಳಿ ಮಾಡಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶ ಪಡಿಸಿಕೊಂಡು ದಂಡ ವಿಧಿಸಲಾಗಿದೆ.
ಇದನ್ನು ಓದಿ: ಹಾವಿನ ಹೊಟ್ಟೆಯಿಂದ ಪ್ಲಾಸ್ಟಿಕ್ ಹೊರತೆಗೆದ ಉರಗ ತಜ್ಞ
ಆದರೂ ಕೆಲವು ಅಂಗಡಿಗಳ ಮಾಲೀಕರು ಪ್ಲಾಸ್ಟಿಕ್ ಉತ್ಪನ್ನಗಳ ಮಾರಾಟ ನಿಲ್ಲಿಸಿಲ್ಲ. ಪ್ಲಾಸ್ಟಿಕ್ ಉತ್ಪನ್ನ ಬಳಸುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಸಾರ್ವಜನಿಕರು ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆ ಕೈ ಬಿಡಬೇಕು ಎಂದರು.
ಹಿರಿಯ ಆರೋಗ್ಯ ನಿರೀಕ್ಷಕ ಸೋಮಶೇಖರ, ಕಿರಿಯ ಆರೋಗ್ಯ ನಿರೀಕ್ಷಕ ಮಾರುತಿ, ಸುಮುದಾಯ ಸಂಘಟಕ ಮೈಲಾರಪ್ಪ ಹಾಗೂ ಇತರ ಸಿಬ್ಬಂದಿ ಇದ್ದರು.