ಬೈಂದೂರು: ಪಪಂ ವ್ಯಾಪ್ತಿಯ ಸಂತೆ ಮಾರುಕಟ್ಟೆ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದು, ಐದು ಅಂಗಡಿಗಳಿಂದ 2500 ರೂ.ದಂಡ ವಸೂಲಿ ಸಹಿತ ಸುಮಾರು 37ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಯಿತು.
ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ಪ್ರದೀಪ್ ಆರ್. ಮಾರ್ಗದರ್ಶನದಲ್ಲಿ ಮುಖ್ಯಾಧಿಕಾರಿ ಅಜಯ್ ಭಂಡಾರಕರ್ ಸೂಚನೆ ಅನ್ವಯ, ಕಿರಿಯ ಆರೋಗ್ಯ ನಿರೀಕ್ಷಕ ಸಂತೋಷ ಎಂ.ಡಿ, ಆರಕ್ಷಕ ಭರತ್ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದೆ. ಪ್ಲಾಸ್ಟಿಕ್ ಮಾರಾಟ ನಿಯಂತ್ರಿಸುವ ಕುರಿತು ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಿಕೆ, ಉದ್ದಿಮೆ ಪರವಾನಗಿ ತಡೆಹಿಡಿಹಿಡಿಯಲಾಗುವುದು ಎಂದು ಮುಖ್ಯಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.