ಬೆಳಗಾವಿ:ಲೋಕಸಭೆ ಚುನಾವಣೆ ಪ್ರಚಾರ ಕಾವು ಏರುತ್ತಿರುವ ನಡುವೆಯೇ ಶಾಸಕ ಲಕ್ಷ್ಮಣ ಸವದಿ ಆಪ್ತನ ಬರ್ಬರ ಹತ್ಯೆ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.
ಅಥಣಿ ತಾಲೂಕಿನ ಖೀಳೆಗಾಂವ್ ಗ್ರಾಮದ ಅಣ್ಣಪ್ಪ ಬಸಪ್ಪ ನಿಂಬಾಳ (58) ಕೊಲೆಯಾದ ದುರ್ದೈವಿ.ಖೀಳೇಗಾಂವ್ ಗ್ರಾಮದ ಹೊರವಲಯದಲ್ಲಿ ಖೀಳೆಗಾಂವ-ಅಥಣಿ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಯಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ,ಖೀಳೆಗಾಂವ ಗ್ರಾಮದ ಕೃಷಿ ಪತ್ತಿನ ಸಂಘ ಸಹಕಾರಿ ಅಧ್ಯಕ್ಷರಾಗಿದ್ದರು.ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಮರಣ ದಾಖಲಾಗಿದೆ.