ಸರಗೂರು: ಆಯುಷ್ಮಾನ್ ಆರೋಗ್ಯ ಮಂದಿರ ನಿರ್ಮಾಣ ಕುರಿತು ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಧರಣೇಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, ತಾಲೂಕಿನಲ್ಲಿ ಒಟ್ಟು 32 ಉಪ ಕೇಂದ್ರಗಳಿದ್ದು ಇದರಲ್ಲಿ 14 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಇನ್ನುಳಿದ 18 ಆರೋಗ್ಯ ಮತ್ತು ಕ್ಷೇಮ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಮಾಡಲು ನಿವೇಶನ ಅವಶ್ಯಕತೆ ಇದೆ. ಈ ಬಗ್ಗೆ ತಹಸೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಿ ನಿವೇಶನ ಗುರಿತಿಸಿಕೊಡಲು ಮುಂದಾಗಬೇಕು ಎಂದರು.
ಸರ್ವೇಕ್ಷಣಾಧಿಕಾರಿ ಡಾ.ಮಹದೇವ್ ಪ್ರಸಾದ್, ಟಿಪಿಒ ಮಹಾದೇವ ಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿ ಚಂದ್ರಶೇಖರ್, ರವಿರಾಜ್, ಪಿಡಿಒಗಳು, ತಾಪಂ ಸಿಬ್ಬಂದಿ ಹಾಜರಿದ್ದರು.