ಜಿಲ್ಲೆ

ಪಿಎಂ ಜೀವನ ಜ್ಯೋತಿ ಲಾಭ ಪಡೆಯಿರಿ

ರಾಘವೇಂದ್ರಗೌಡ ಭೀ ಪಾಟೀಲ್

ಚಿಕ್ಕೋಡಿ: ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆಯು ವಾರ್ಷಿಕ ಪ್ರೀಮಿಯಂ 436 ರೂ. ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬೀಮಾ ಯೋಜನೆ ವಾರ್ಷಿಕ ಪ್ರೀಮಿಯಂ ಪಾವತಿ 20 ರೂ. ಪಾವತಿಸಿದರೆ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಾದ್ರೋಳಿ ಹೇಳಿದರು.

ತಾಲೂಕು ಪಂಚಾಯಿತಿ ಆವರಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಯೋಜನೆಯು ಮರಣ ಹೊಂದಿದರೆ ರಕ್ಷಣೆಯಾಗಿದೆ. 18 ರಿಂದ 50 ವರ್ಷ ವಯಸ್ಸಿನವರು ವಿಮೆ ಮಾಡಿಸಬಹುದು ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯು ಅಪಘಾತದಿಂದ ಮರಣ ಅಥವಾ ಅಂಗವೈಕಲ್ಯಕ್ಕೆ ರಕ್ಷಣೆ ನೀಡುತ್ತದೆ ಎಂದು ತಿಳಿಸಿದರು.

ಸಹಾಯಕ ನಿರ್ದೇಶಕ ಎಸ್.ಎಸ್.ಮಠದ, ಶಿವಾನಂದ ಶಿರಗಾಂವೆ, ಸಹಾಯಕ ಲೆಕ್ಕಾಧಿಕಾರಿ ರಾಜೇಂದ್ರ ಮೈಗೂರ, ಸಿಡಿಪಿಒ ಸಂತೋಷ ಕಾಂಬಳೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಅರ್ಚನಾ ಸಾನೆ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎ.ಮೆಕನಮರಡಿ, ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ರಂಜಿತ್ ಕಾರ್ಣಿಕ, ಎಂಐಎಸ್ ಸಂಯೋಜಕ ಚೇತನ ಶಿರಹಟ್ಟಿ, ಆಡಳಿತ ಸಹಾಯಕ ಅಕ್ಷಯ ಠಕ್ಕಪ್ಪಗೋಳ, ಸಂಜೀವಿನಿ ಯೋಜನೆ ಬಸುರಾಜ ಡಿ., ಇತರರಿದ್ದರು.