ಬೆಳಗಾವಿ: ಕರೊನಾ ಸಂತ್ರಸ್ತರಿಗಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಸಂಸದರ ನಿಧಿಯಿಂದ ಒಂದು ಕೋಟಿ ರೂ. ಹಾಗೂ ವೇತನದಿಂದ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಶಾಸಕರು, ಸಂಸದರು ಹಾಗೂ ಬಿಜೆಪಿಯ ಹಿರಿಯ ಮುಖಂಡರಿಗೆ ಹಾಗೂ ದೇಶದ ಜನತೆಗೆ ಕರೊನಾ ವೈರಸ್ ಮಹಾಮಾರಿ ವಿರುದ್ಧ ಸರ್ಕಾರ ರೂಪಿಸುತ್ತಿರುವ ಯೋಜನೆಗೆ ಧನಸಹಾಯ ನೀಡುವಂತೆ ತಮ್ಮ ಭಾಷಣದಲ್ಲಿ ಮನವಿ ಮಾಡಿದ್ದರು. ಅದಕ್ಕೆ ಆದಾಯ ತೆರಿಗೆ ಇಲಾಖೆಯ 80ಜಿ ಸೆಕ್ಷನ್ ಅಡಿಯಲ್ಲಿ ತೆರಿಗೆ ವಿನಾಯಿತಿಯೂ ದೊರೆಯಲಿದೆ.