ಜಿಲ್ಲೆ

2 ಸಾವಿರ ಪಲಾನುಭವಿಗಳಿಗೆ ಸಾಲ ಸೌಲಭ್ಯ ಗುರಿ

ಉಡುಪಿ: ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಜಿಲ್ಲೆಯಲ್ಲಿ 6611 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಈಗಾಗಲೇ 2209 ಲಾನುಭವಿಗಳು ತರಬೇತಿ ಪಡೆದಿದ್ದಾರೆ. 1588 ಮಂದಿ ಸಾಲಕ್ಕಾಗಿ ಬ್ಯಾಂಕ್​ ಗಳಿಗೆ ಅರ್ಜಿ ಸಲ್ಲಿಸಿದ್ದು, 488 ಮಂದಿಗೆ ಸಾಲ ಮಂಜೂರಾಗಿದೆ. ಈ ಮಾಸಾಂತ್ಯದೊಳಗೆ 2 ಸಾವಿರ ಮಂದಿಗೆ ಸಾಲಸೌಲಭ್ಯ ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕೋರ್ಟ್​ ಹಾಲ್​ ಕಚೇರಿಯಲ್ಲಿ ಪಿ.ಎಂ ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 15739 ಮಂದಿ ಅರ್ಜಿ ಸಲ್ಲಿಸಿದ್ದು, 13238 ಅರ್ಜಿ ರಾಜ್ಯ ಸರ್ಕಾರದ ಅನುಮೋದನೆ ಸಲ್ಲಿಕೆಯಾಗಿದೆ. ತರಬೇತಿ ಪಡೆದವರಿಗೆ 15 ಸಾವಿರ ರೂ. ಮೌಲ್ಯದ ಕಿಟ್ಗಳನ್ನು ವಿತರಿಸಲಾಗುತ್ತಿದೆ. 11 ತರಬೇತಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 4 ಕೇಂದ್ರಗಳು ಸುಸಜ್ಜಿತವಾಗಿದ್ದು, ಲಾನುಭವಿಗಳಿಗೆ ಪೂರ್ಣಪ್ರಮಾಣದ ತರಬೇತಿ ನೀಡಬೇಕು. ಮಂಜೂರಾತಿ ದೊರೆತ ಬಳಿಕವೂ ಆರಂಭಗೊಳ್ಳದೇ ಇರುವ ತರಬೇತಿ ಕೇಂದ್ರಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕರಾದ ಗುರ್ಮೆ ಸುರೇಶ್​ ಶೆಟ್ಟಿ, ಯಶ್​ ಪಾಲ್​ ಸುವರ್ಣ, ಕಿರಣ್​ ಕುಮಾರ್​ ಕೊಡ್ಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್​ ಬಾಯಲ್​, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್​ ನಾಯಕ್​ ಉಪಸ್ಥಿತರಿದ್ದರು.