ಕಾಸರಗೋಡು: ಚಂದೇರ ಪೊಲೀಸ್ ಠಾಣೆ ವ್ಯಾಪ್ತಿಯ ಹೈಯರ್ ಸೆಕೆಂಡರಿ ಶಾಲೆಯೊಂದರ ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅದೇ ಶಾಲೆಯ ಪ್ಲಸ್‌ವನ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಪೊಲೀಸರು ಪೋಕ್ಸೋ ಅನ್ವಯ ಕೇಸ್ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾಗಿದೆ. ಈ ಮಧ್ಯೆ ಬಾಲಕಿಗೆ ಕಿರುಕುಳ ನೀಡಿದ್ದ ಈತ ನಂತರ ಈಕೆಯಿಂದ ದೂರಾಗಿದ್ದ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು. ವೈದ್ಯಕೀಯ ತಪಾಸಣೆಯಿಂದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯ ದೃಢಪಟ್ಟಿತ್ತು.