ಜಿಲ್ಲೆ

ಬಾಲಕನ ಮೇಲೆಯೇ ಅತ್ಯಾಚಾರವೆಸಗಿದ ಯುವಕ; ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Webdesk - Ravikanth

ವಿಜಯನಗರ: ಹೊಸ ವರ್ಷದ ಆರಂಭದ ದಿನವೇ ಒಂದು ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ. ಅದೂ ಬಾಲಕನ ಮೇಲೆಯೇ ಯುವಕನೊಬ್ಬ ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ವಿಜಯಪುರ ಜಿಲ್ಲೆಯ ಕೂಡ್ಲಿಗಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಇದು ವರದಿಯಾಗಿದೆ.

ಏಳು ವರ್ಷದ ಬಾಲಕನ ಮೇಲೆ 17 ವರ್ಷದವನೊಬ್ಬ ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವಿಜಯನಗರ ಎಸ್​ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ.