ಕಾರ್ಕಳ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಮಕ್ಕಳ ರಕ್ಷಣಾ ಸಮಿತಿ ಆಶ್ರಯದಲ್ಲಿ ಪ್ರೌಢಶಾಲಾ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಆರೋಗ್ಯ ರಕ್ಷಣೆ, ಮಕ್ಕಳ ಹಕ್ಕುಗಳು ಮತ್ತು ವೈಯಕ್ತಿಕ ಸುರಕ್ಷತೆಗಳ ಕುರಿತು ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ಆಯೋಜಿಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನಾ ನಾಯಕ್, ಸಾಮಾಜಿಕ ಜಾಲತಾಣಗಳು ಹಾಗೂ ಅಪರಿಚಿತರೊಂದಿಗಿನ ಸಂಬಂಧಗಳಿಂದ ಎದುರಾಗುವ ಸಮಸ್ಯೆ, ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ನೀಡಿದರು. ಹಿರಿಯ ವೈದ್ಯಾಧಿಕಾರಿ ಡಾ.ಶವಾ ಶುಕೂರ್ ವಾದಕ ದ್ರವ್ಯಗಳ ಸೇವನೆಯ ದುಷ್ಪರಿಣಾಮ, ಮೊಬೈಲ್ ಗೀಳಿನಿಂದ ಹೊರಬರುವ ಕುರಿತು ಮಾಹಿತಿ ನೀಡಿದರು.
ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾ, ಉಪಪ್ರಾಂಶುಪಾಲ ಪ್ರಕಾಶ್ ಭಟ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಜೋತ್ಸ್ನಾಸ್ನೇಹಲತಾ, ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಮಕ್ಕಳ ರಕ್ಷಣಾ ಸಮಿತಿಯ ಬೋಧಕ ಪ್ರತಿನಿಧಿಗಳಾದ ಶಿಜಿ ಸಿ.ಕೆ., ಮಂಗಳಾ ಉಪಸ್ಥಿತರಿದ್ದರು. ಪಾವನಾ ಧನ್ಯರಾಜ್ ಕಾರ್ಯಕ್ರಮ ನಿರೂಪಿಸಿದರು.