ರಾಮನ ಭಕ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್, ಎಸ್.ಮಲ್ಲನಗೌಡ, ಶ್ರೀನಿವಾಸ್ ಮೋದ್ಕರ್, ಗಣಪಾಲ್ ಐನಾಥ್‌ರೆಡ್ಡಿ ಮತ್ತಿತರರಿದ್ದರು.  
ಜಿಲ್ಲೆ

ರಾಮನ ಭಕ್ತರ ಮೇಲೆ ಪೊಲೀಸ್ ದೌರ್ಜನ್ಯ ಖಂಡನೆ

ಬಳ್ಳಾರಿ: ರಾಮನ ಭಕ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಬಳ್ಳಾರಿಯ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ ಮಾತನಾಡಿ, ಪೊಲೀಸ್ ಇಲಾಖೆಯಿಂದ ರಾಮನ ಭಕ್ತರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದರು.

ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಿಂದೆ ನಡೆದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ, ಹಿಂದು ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಅಯೋಧ್ಯೆತಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆ ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇರುವಾಗ ಈ ರೀತಿ ಹಿಂದು ಕಾರ್ಯಕರ್ತರನ್ನು ಬಂಧಿಸುತ್ತಿರುವುದು ಸರಿಯಲ್ಲ. ಸರ್ಕಾರ ಕೂಡಲೇ ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಾ.ಎಸ್.ಜೆ.ವಿ.ಮಹಿಪಾಲ್, ಎಸ್.ಮಲ್ಲನಗೌಡ, ಶ್ರೀನಿವಾಸ್ ಮೋದ್ಕರ್, ಗಣಪಾಲ್ ಐನಾಥ್‌ರೆಡ್ಡಿ, ಎಚ್.ತಿಪ್ಪಣ್ಣ, ಸಿದ್ದೇಶ್ ಮುಂತಾದವರಿದ್ದರು.