ಜಿಲ್ಲೆ

ಪೊಲೀಸ್ ಪೇದೆ ಅತ್ಮಹತ್ಯೆ

ಮರಿದೇವ ಹೂಗಾರ

ಹುಬ್ಬಳ್ಳಿ: ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ನವನಗರದ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮಹೇಶ ಹೆಸರೂರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಹೇಶ ಹಾಗೂ ಲಕ್ಷ್ಮೀ ಒಂದೇ ವೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಮಹೇಶ ಹಾಗೂ ಲಕ್ಷ್ಮೀಗೂ ಬೇರೆಯವರೊಂದಿಗೆ ಮದುವೆ ಆಗಿದೆ. ಆದರೂ ಲಕ್ಷ್ಮೀಯೊಂದಿಗೆ ನವನಗರದ ಬಾಡಿಗೆ ಮನೆಯಲ್ಲಿ ಗಂಡ-ಹೆಂಡತಿಯಂತೆ ಸಂಸಾರ ಮಾಡಿಕೊಂಡಿದ್ದರು ಎನ್ನಲಾಗಿದೆ.
ಕಳೆದ ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹದು ಎಂದು ಶಂಕಿಸಲಾಗಿದೆ. ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಕಿಟಕಿ ಮೂಲಕ ನೋಡಿದಾಗ ಒಂದೇ ವೇಲ್‌ನಲ್ಲಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ನವನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.