ಜಿಲ್ಲಾ ಪೋಲಿಸ್​ ಇಲಾಖೆಯಿಂದ ಜರುಗಿದ ಪೋಲಿಸ್​ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಎಸ್ಪಿ ಟಿ. ೈಜುದ್ದೀನ್​ ಅವರನ್ನು ಸನ್ಮಾನಿಸಲಾಯಿತು. ಬಿ.ಎಸ್​. ನೇಮಗೌಡ, ಎಂ. ಬಿ. ಸಂಕದ, ಬಿ. ಇನಾಮದಾರ, ಡಿ. ಎಸ್​ ಧನಗರ, ಪ್ರಭುಗೌಡ ಕಿರೆದಳ್ಳಿ, ಎಂ. ಟಿ. ಭಟ್​ ಇತರರು ಇದ್ದರು. 
ಜಿಲ್ಲೆ

ಗದಗ: ಪೊಲೀಸ್​ ಧ್ವಜ ದಿನಾಚರಣೆ

Gadag - Shivanand Hiremath

ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್​ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಎಸ್ಪಿ ಟಿ. ೈಜುದ್ದೀನ್​ ಹೇಳಿದರು.
ಜಿಲ್ಲಾ ಪೋಲಿಸ್​ ಇಲಾಖೆಯಿಂದ ಮಂಗಳವಾರ ಜಿಲ್ಲಾ ಸಶಸ್ತ್ರ ಪೋಲಿಸ್​ ಟಕ ಮೈದಾನದಲ್ಲಿ ಆಯೋಜಿಸಿದ್ದ ಪೋಲಿಸ್​ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇಲಾಖೆಯಲ್ಲಿ ಪ್ರತಿ ದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೌಕರರು ಮಾನಸಿಕ ಹಾಗೂ ದೈಹಿಕ ಸದೃಢವಾಗಿರುವುದು ಅವಶ್ಯಕವಾಗಿದೆ. ಪೊಲೀಸ್​ ಇಲಾಖೆ ಹಾಗೂ ಮೇಲಾಧಿಕಾರಿಗಳಿಗೆ ಇನ್ನೂ ಹೆಚ್ಚಿನ ಗೌರವ ತರುವ ಕಾರ್ಯ ಮಾಡಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಬಿ. ಎಸ್​. ನೇಮಗೌಡ ಮಾತನಾಡಿ, ಹಗಲು&ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಪೊಲೀಸ್​ ಸಿಬ್ಬಂದಿಯವರು ಸದಾ ಕಾರ್ಯ ನಿರತರಾಗಿರುತ್ತಾರೆ. ಪೊಲೀಸ್​ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಈ ಸಮಯದಲ್ಲಿ ಸ್ಮರಿಸಿಕೊಳ್ಳಲು ಹಾಗೂ ನಿವೃತ್ತಿ ನಂತರ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿ ವರ್ಷ ಪೊಲೀಸ ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್​ ಧ್ವಜಗಳನ್ನು ಮಾರಾಟ ಮಾಡಿ, ಅದರಿಂದ ಬಂದ ಹಣದಲ್ಲಿ ಶೇಕಡಾ ಶೇ. 50 ರಷ್ಟು ಹಣವನ್ನು ನಿವೃತ್ತ ಪೊಲೀಸ್​ ಅಧಿಕಾರಿಗಳ ೇಮ ನಿಧಿಗೆ ಮತ್ತು ಶೇ. 50 ರಷ್ಟು ಹಣವನ್ನು ಕೇಂದ್ರ ನಿವೃತ್ತ ಪೊಲೀಸ್​ ಕಲ್ಯಾಣ ನಿಧಿಗೆ ಜಮಾ ಮಾಡಿ ಈ ನಿಧಿಯನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ಪೊಲೀಸ್​ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವೈದ್ಯಕಿಯ ಚಿಕಿತ್ಸಾ ವೆಚ್ಚ ಮಂಜೂರಿಸುವ ಸಲುವಾಗಿ ವಿನಿಯೋಗಿಸಲಾಗುತ್ತದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ನಿವೃತ್ತ ಪೊಲೀಸ್​ ಅಧಿಕಾರಿಗಳ ೇಮ ನಿಧಿ ಸಮಿತಿ ಸಭೆ ಕರೆದು ಸದರಿ ಸಭೆಗಳಲ್ಲಿ ನಿವೃತ್ತ ಪೊಲೀಸ್​ ಅಧಿಕಾರಿಯವರ ಕುಂದುಕೊರತೆಗಳನ್ನು ಆಲಿಸಿ, ಕುಂದುಕೊರತೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರು ಕ್ಯಾಂಟೀನ್​ ಉಪಯೋಗ ಪಡೆಯುತ್ತಿದ್ದು, ಈ ಸದುಪಯೋಗವನ್ನು ನಿವೃತ್ತ ಪೊಲೀಸ್​ ಅಧಿಕಾರಿ ಯವರುಗಳೂ ಸಹ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸೇವಾ ನಿವೃತ್ತರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಹೆಚ್ಚುವರಿ ಪೊಲೀಸ್​ ವರಿಷ್ಠಾಕಾರಿ ಎಂ. ಬಿ. ಸಂಕದ ,ಡಿಎಸ್ಪಿ ಡಿ. ಬಿ. ಇನಾಮದಾರ, ಡಿ.ಎಸ್ಪಿ ಡಿ. ಎಸ್​ ಧನಗರ, ಪ್ರಭುಗೌಡ ಕಿರೆದಳ್ಳಿ, ಎಂ. ಟಿ. ಭಟ್​ ಇತರರು ಇದ್ದರು.

ಬಾಕ್ಸ್​:
ಪ್ರಸಕ್ತ ವರ್ಷ ನಿವೃತ್ತ ಪೊಲೀಸ್​ ಅಧಿಕಾರಿಗಳ ೇಮನಿಧಿಯಿಂದ 39 ಜನ ನಿವೃತ್ತ ಪೊಲೀಸ್​ ಅಧಿಕಾರಿ, ಸಿಬ್ಬಂದಿಯವರಿಗೆ 1.27 ಲಕ್ಷ ವೈದ್ಯಕಿಯ ಧನ ಸಹಾಯ ಪಾವತಿಸಲಾಗಿದೆ ಮತ್ತು ಮರಣ ಹೊಂದಿದ 22 ಜನ ನಿವೃತ್ತ ಪೊಲೀಸ್​ ಅಧಿಕಾರಿಗಳ ಅಂತ್ಯಸಂಸ್ಕಾರಕ್ಕೆ 2.20 ಲಕ್ಷ ನೀಡಿಲಾಗಿದೆ ಎಂದು ಬಿ.ಎಸ್​.ನೇಮಗೌಡ ತಿಳಿಸಿದರು.