ಜಿಲ್ಲೆ

ಪೊಲೀಸ್ ಹೆಡ್‌ಕಾನ್‌ಸ್ಟೆಬಲ್ ಆತ್ಮಹತ್ಯೆ

Mangaluru - Desk - Rajesh Shetty

ಕಾರ್ಕಳ: ಇಲ್ಲಿನ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೆಬಲ್ ಎಚ್.ಸಿ.ಪ್ರಶಾಂತ್ ಮಿಯ್ಯರು(49) ಶನಿವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಿಯ್ಯರು ಗ್ರಾಮದ ಕಾಜರಬೈಲು ನಿವಾಸಿಯಾಗಿದ್ದ ಅವರು ಅವಿವಾಹಿತರಾಗಿದ್ದು, ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಅದೇ ನೋವಿನಿಂದ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. 1997ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಅವರು ಇತ್ತೀಚೆಗೆ ಕಾರ್ಕಳ ನಗರ ಠಾಣೆಯಿಂದ ಗ್ರಾಮಾಂತರ ಠಾಣೆಗೆ ವರ್ಗವಾಗಿ ಪ್ರಸ್ತುತ ರಜೆಯಲ್ಲಿದ್ದರು. ಶನಿವಾರ ರಾತ್ರಿ ಮನೆಯಲ್ಲಿ ಮಲಗಿದ್ದವರು ಬಳಿಕ ಮನೆ ಹಿಂಬದಿ ತಗಡು ಶೀಟ್ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.