ಜಿಲ್ಲೆ

ಕ್ಲಬ್​ನಲ್ಲಿ ಜೂಜುದಂಧೆ ನಡೆಯುತ್ತಿದ್ದರೂ ನಿರ್ಲಕ್ಷಿಸಿದ ಇನ್​ಸ್ಪೆಕ್ಟರ್ ಅಮಾನತು; ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಕ್ರಮ

ಬೆಂಗಳೂರು: ಕ್ಲಬ್‌ನಲ್ಲಿ ಜೂಜು ದಂಧೆ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಸಂಪಿಗೆಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ಎಚ್.ಬಿ. ಸುರೇಶ್ ಅವರನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅಮಾನತು ಮಾಡಿದ್ದಾರೆ.

ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಕಿಂಗ್ಸ್ ವಿನ್ನರ್ ಕ್ಲಬ್ ಮೇಲೆ ಸೆ.4ರಂದು ಸಿಸಿಬಿ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿತ್ತು. ಹಲವು ದಿನಗಳಿಂದ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿದ್ದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಕ್ಲಬ್ ಚಟುಟಿಕೆಗಳಿಗೆ ಕಡಿವಾಣ ಹಾಕದೆ ಸಂಪಿಗೆಹಳ್ಳಿ ಪೊಲೀಸರು ನಿರ್ಲಕ್ಷ್ಯ ತೋರಿದ ಆರೋಪ ಕೂಡ ಕೇಳಿ ಬಂದಿತ್ತು. ಈ ಸಂಬಂಧ ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಪಡೆದ ಆಯುಕ್ತರು, ಕರ್ತವ್ಯಲೋಪ ಆರೋಪದಡಿ ಇನ್‌ಸ್ಪೆಕ್ಟರ್‌ ಅವರನ್ನು ಅಮಾನುತಗೊಳಿಸಿ ಆದೇಶಿಸಿದ್ದಾರೆ.