ಜಿಲ್ಲೆ

ಬಸ್ ತಂಗುದಾಣಕ್ಕೆ ಪೊಲೀಸ್ ಜೀಪ್ ಡಿಕ್ಕಿ  ಮಹಿಳಾ ಇನ್‌ಸ್ಪೆಕ್ಟರ್‌ಗೆ ಗಾಯ

ಮಂಗಳೂರು: ಪೊಲೀಸ್ ಜೀಪ್ ಬಸ್ ತಂಗುದಾಣಕ್ಕೆ ಡಿಕ್ಕಿಯಾದ ಘಟನೆ ಎಡಪದವಿನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಮಹಿಳಾ ಇನ್‌ಸ್ಪೆಕ್ಟರ್ ಗಾಯಗೊಂಡಿದ್ದಾರೆ.

ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರೇವತಿ ಅವರಿದ್ದ ಪೊಲೀಸ್ ಜೀಪ್ ಎಡಪದವು ವಿವೇಕಾನಂದ ಜೂನಿಯರ್ ಕಾಲೇಜು ಮುಂಭಾಗದಲ್ಲಿರುವ ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇನ್‌ಸ್ಪೆಕ್ಟರ್ ರೇವತಿ ಅವರ ಕೈಗೆ ಗಾಯಗಳಾಗಿವೆ. ತಕ್ಷಣ ಅಲ್ಲೇ ಇದ್ದ ಎಡಪದವು ಗ್ರಾಪಂ ಅಧ್ಯಕ್ಷ ಸುಕುಮಾರ್ ದೇವಾಡಿಗ ಮತ್ತಿತರರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯಲ್ಲಿ ಬಸ್ ತಂಗುದಾಣ ಹಾಗೂ ಪಕ್ಕದ ಅಂಗಡಿಗೆ ಹಾನಿಯಾಗಿದೆ.