ಜಿಲ್ಲೆ

ಪೊಲೀಸ್​ ಹುತಾತ್ಮ ದಿನ ನಾಳೆ

ಧಾರವಾಡ; ಜಿಲ್ಲಾ ಪೊಲೀಸ್​ ಇಲಾಖೆಯಿಂದ ಅ. 21ರಂದು ಬೆಳಗ್ಗೆ 8 ಗಂಟೆಗೆ ಸಶಸ್ತ್ರ ಮೀಸಲು ಪಡೆ ಕೇಂದ್ರ ಸ್ಥಾನದಲ್ಲಿರುವ ಹುತಾತ್ಮರ ಸ್ಮಾರಕ ಆವರಣದಲ್ಲಿ ಪೊಲೀಸ್​ ಹುತಾತ್ಮರ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಿ.ರಮಾ, ವಿಶೇಷ ಆಹ್ವಾನಿತರಾಗಿ ಐಐಟಿ ಡೀನ್​ ಪ್ರೊ. ಎಂ.ಎಸ್​. ಶಿವಪ್ರಸಾದ ಆಗಮಿಸುವರು. ಜಿಲ್ಲಾ ಪೊಲೀಸ್​ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.