ವಿಜಯವಾಣಿ ಸುದ್ದಿಜಾಲ ಕಲಬುರಗಿ
ಗಣೇಶ ವಿಸರ್ಜನೆ ಮತ್ತು ಈದ್ ನಿಮಿತ್ತವಾಗಿ ಮದ್ಯ ಮಾರಾಟ ನಿಷೇಧವಿದ್ದರೂ ಅಕ್ರಮವಾಗಿ ನಗರದ ವಿವಿಧ ಕಡೆಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿಯಂತೆ ೧೦ಕ್ಕೂ ಹೆಚ್ಚು ಕಡೆಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಆರು ಜನರನ್ನು ಬಂಧಿಸಿ ಅಪಾರ ಪ್ರಮಾಣದ ಮದ್ಯ ಹಾಗೂ ಬಿಯರ್ ವಶಪಡಿಸಿಕೊಂಡಿದ್ದಾರೆ.
ವಿಶ್ವವಿದ್ಯಾಲಯ, ರೋಜಾ, ಅಶೋಕನಗರ, ಸ್ಟೇಷನ್ ಬಜಾರ, ರಾಘವೇಂದ್ರ ನಗರ, ಸಬ್ ಅರ್ಬನ್ ಹಾಗೂ ಚೌಕ್ ಪೊಲೀಸರು ತಮ್ಮ ಠಾಣೆಗಳ ವ್ಯಾಪ್ತಿಯಲ್ಲಿ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಮದ್ಯದ ಬಾಟಲಿ, ಟೆಟ್ರಾ ಪ್ಯಾಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಮದ್ಯ ಮಾರಾಟದಿಂದ ಸಂಗ್ರಹಗೊAಡಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಆಯಾ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿವೆ.