ಜಿಲ್ಲೆ

ಕರಾವಳಿಯಲ್ಲಿ ಪೊಲೀಸ್‌ರಾಜ್ ವ್ಯವಸ್ಥೆ

ಇಂದಿರಾ ಎನ್ ಕೆ

ಕಾರ್ಕಳ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.

ಪ್ರಚೋದನಕಾರಿ ಭಾಷಣ ನಿಯಂತ್ರಣ ನೆಪದಲ್ಲಿ ಕಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡವರ ಮೇಲೆ ಅನಗತ್ಯವಾಗಿ ಪ್ರಕರಣ ದಾಖಲಿಸಿ ಕಿರುಕುಳ ನೀಡಲಾಗುತ್ತಿದೆ. ನಿರ್ದಾಕ್ಷಿಣ್ಯ ಕ್ರಮವನ್ನು ಹಿಂದು ಸಂಘಟನೆಗೆ ಸೀಮಿತಗೊಳಿಸುತ್ತಿದ್ದು ಸರ್ಕಾರದ ಈ ಏಕಪಕ್ಷೀಯ ಕ್ರಮ ಒಪ್ಪಲು ಸಾಧ್ಯವಿಲ್ಲ. ಅಷ್ಟಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಹಾಗೂ ಹಿಂಸೆಗೆ ಪ್ರೇರಣೆ ನೀಡಿದವರು ಯಾರು? ಪೊಲೀಸ್ ದೌರ್ಜನ್ಯದ ವಿರುದ್ಧ ಪ್ರತಿಭಟನೆ ನಡೆಸಿದವರಿಗೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶ ರವಾನಿಸಿದವರ ಮೇಲೆ ಮಾತ್ರ ನಿಮ್ಮ ಕಾನೂನು ಕ್ರಮವೇ? ಎಂದು ಪ್ರಸ್ನಿಸಿರುವ ಸುನೀಲ್ ಕುಮಾರ್, ಪೊಲೀಸರ ಈ ಕ್ರಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಉದ್ವಿಗ್ನ ಸ್ಥಿತಿಗೆ ಕಾರಣವಾಗುತ್ತದೆ. ಎಫ್‌ಐಆರ್ ಅಸ್ತ್ರ ಬಳಸಿ ಶಾಂತಿ ಸ್ಥಾಪನೆ ಭ್ರಮೆ ಬೇಡ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.