ಜಿಲ್ಲೆ

ರಾಜಕಾರಣದಲ್ಲಿ ಯಾವುದನ್ನೂ ಅಲ್ಲಗಳೆಯುವಂತಿಲ್ಲ

ದಾವಣಗೆರೆ: ರಾಜಕಾರಣದಲ್ಲಿ ಯಾವ ಸಂದರ್ಭದಲ್ಲಿ ಏನಾಗುತ್ತದೆ ಎಂದು ಹೇಳಲು ಆಗುವುದಿಲ್ಲ. ಯಾವುದನ್ನೂ ಅಲ್ಲಗಳೆಯುವಂತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರದ ಅಜಿತ್ ಪವಾರ್ ಪ್ರಕರಣದ ಹಿನ್ನೆಲೆಯಲ್ಲಿ ಈ ರೀತಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲೂ ಇಂಥ ಹಲವು ಸಂದರ್ಭಗಳನ್ನು ನೋಡಿದ್ದೇವೆ ಎಂದು ತಿಳಿಸಿದರು.

ಬಿಟ್ ಕಾಯಿನ್ ಸೇರಿ ಯಾವುದೇ ವಿಚಾರವಾಗಿ ಸರ್ಕಾರ ಯಾವುದಾದರೂ ಸಂಸ್ಥೆಯಿಂದ ತನಿಖೆ ನಡೆಸಲಿ. 2013 ರಿಂದ 2023ರ ವರೆಗಿನ ಆರೋಪಗಳೆಲ್ಲವನ್ನೂ ತನಿಖೆಗೆ ಒಳಪಡಿಸಲಿ.

ಕಾಂಗ್ರೆಸ್ ಆಡಳಿತದ ಅವಧಿಯೂ ಒಳಗೊಂಡಂತೆ ತನಿಖೆ ನಡೆಯಲಿ. ಅದು ರಾಜಕೀಯ ಪ್ರೇರಿತ ಆಗದಿರಲಿ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಸರ್ಕಾರ ಹೇಳಿದ್ದು ಒಂದು, ಮಾಡಿದ್ದು ಇನ್ನೊಂದು. 5 ಧೋಖಾಗಳನ್ನು ನೀಡಿ ಜನರಿಗೆ ಮೋಸ ಮಾಡಿದ್ದಾರೆ. ಇದರ ವಿರುದ್ಧ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತಿದ್ದೇವೆ ಎಂದು ತಿಳಿಸಿದರು.