ಯಲಬುರ್ಗಾದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಬಸವರಾಜ ರಾಯರಡ್ಡಿ ಸಹಕಾರ ಜಾಗೃತಿ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಸಹಕಾರ ಜಾಗೃತಿ ಸಮಾವೇಶ ಸಮಿತಿ ಅಧ್ಯಕ್ಷ ರಾಘವೇಂದ್ರ ಆಚಾರ್ ಜೋಶಿ, ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಶೇಖರಗೌಡ ಉಳ್ಳಾಗಡ್ಡಿ, ಫಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರಯ್ಯ ಹಿರೇಮಠ, ಸಹಕಾರ ಸಂಘಗಳ ಉಪ ನಿಬಂಧಕ ಸಜ್ಜನರ ಪ್ರಕಾಶ ಇದ್ದರು. 
ಜಿಲ್ಲೆ

ರಾಜಕೀಯ ಆಡಳಿತ ಸುಧಾರಣೆ ಅಗತ್ಯ

Kopala - Desk - Eraveni

ಯಲಬುರ್ಗಾ: ಪ್ರಜಾಪ್ರಭುತ್ವ ಸ್ಥಾಪನೆ, ಜಾತ್ಯಾತೀತ ರಾಷ್ಟ್ರ ನಿರ್ಮಾಣಕ್ಕಾಗಿ ಡಾ.ಅಂಬೇಡ್ಕರ್ ಅವರಿಂದ ರಚಿತಗೊಂಡ ಸಂವಿಧಾನದ ಆಶಯಗಳಂತೆ ಎಲ್ಲರೂ ಬದುಕು ಕಟ್ಟಿಕೊಳ್ಳಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಭಾನುವಾರ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.

ದೇಶವನ್ನು ಪರಕೀಯರ ದಾಸ್ಯದಿಂದ ಮುಕ್ತಿಗೊಳಿಸಲು ಗಾಂಧೀಜಿ, ನೇತಾಜಿ, ನೆಹರು, ವಲ್ಲಭಬಾಯಿ ಪಟೇಲ್ ಹೀಗೆ ಅನೇಕ ಧುರೀಣರ ಶ್ರಮ ಸಾಕಷ್ಟಿದೆ.

ಸ್ವಾತಂತ್ರೃ ನಂತರ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆ, ಸಮಾನತೆ ಕಲ್ಪಿಸಲು ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನ ಜಗತ್ತಿನಲ್ಲಿಯೇ ಅತ್ಯುತ್ತಮವಾಗಿದೆ. ರಾಜಕೀಯ ಆಡಳಿತ ಸುಧಾರಣೆ, ಭ್ರಷ್ಟಾಚಾರ ರಹಿತವಾಗಬೇಕಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣದ ಕೊರತೆ ಇಲ್ಲ. ತೆರಿಗೆ ಸಂಗ್ರಹ, ಜಿಡಿಪಿಯಲ್ಲಿ ಮೊದಲ ಸ್ಥಾನದಲ್ಲಿದ್ದೇವೆ. ಕ್ಷೇತ್ರ ಸಾಕಷ್ಟು ಅಭಿವೃದ್ಧಿಗೊಂಡಿದೆ. ಶಿಕ್ಷಣಕ್ಕೆ ಆದ್ಯತೆ, ನರ್ಸಿಂಗ್ ಕಾಲೇಜು ಸ್ಥಾಪನೆಗೆ ಪ್ರಯತ್ನ,

ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಕ್ಕೆ ಶ್ರಮಿಸಲಾಗುವುದು ಎಂದರು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಚಿಣ್ಣರು ಮಹನೀಯರ ವೇಷಧರಿಸಿ ಗಮನಸೆಳೆದರು. ಹೊಸಳ್ಳಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲಾ ವಿದ್ಯಾರ್ಥಿಗಳಿಂದ ಮಲ್ಲಗಂಬ ಪ್ರದರ್ಶನ ನಡೆಯಿತು.

ಫೆ.8ರಂದು ಕುಕನೂರಿನಲ್ಲಿ ನಡೆಯುವ ಸಹಕಾರ ಜಾಗೃತಿ ಸಮಾವೇಶ ಹಿನ್ನಲೆಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಯಲಬುರ್ಗಾ ಮತ್ತು ಕುಕನೂರಿಗೆ ತಲಾ ಒಂದು ಸೆಪ್ಟಿಕ್ ಟ್ಯಾಂಕ್ ವಾಹನಕ್ಕೆ ಶಾಸಕ ಬಸವರಾಜ ರಾಯರಡ್ಡಿ ಚಾಲನೆ ನೀಡಿದರು.

ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ಪಪಂ ಅಧ್ಯಕ್ಷ ಅಂದಯ್ಯ ಕಳ್ಳಿಮಠ, ತಾಪಂ ಇಒ ಸಂತೋಷ ಪಾಟೀಲ್, ಬಿಇಒ ಸೋಮಶೇಖರಗೌಡ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ಶೇಖರಗೌಡ ಉಳ್ಳಾಗಡ್ಡಿ, ರಾಘವೇಂದ್ರಾಚಾರ್ಯ ಜೋಶಿ, ಚಂದ್ರಶೇಖರಯ್ಯ ಹಿರೇಮಠ, ಬಿ.ಎಂ.ಶಿರೂರು, ಮಹೇಶ ಹಳ್ಳಿ, ಆನಂದ ಉಳ್ಳಾಗಡ್ಡಿ, ಮಲ್ಲೇಶಗೌಡ ಮಾಲಿಪಾಟೀಲ್, ಈರಪ್ಪ ಕುಡಗುಂಟಿ, ಪಪಂ ಸದಸ್ಯರಾದ ಡಾ.ನಂದಿತಾ ಶಿವನಗೌಡ ದಾನರಡ್ಡಿ, ರಿಯಾಜ್‌ಅಹ್ಮದ್ ಖಾಜಿ,

ಅಮರೇಶ ಹುಬ್ಬಳ್ಳಿ, ಹನುಮಂತ ಭಜಂತ್ರಿ, ರೇವಣಪ್ಪ ಹಿರೇಕುರುಬರ, ನಾಗೇಶ, ಬಿ.ಮಲ್ಲಿಕಾರ್ಜುನ, ನಿಂಗನಗೌಡ ಪಾಟೀಲ್, ಪ್ರಮೋದ ತುಂಬಳ, ಶ್ರೀಧರ ತಳವಾರ್ ಇತರರಿದ್ದರು.

ತಾಪಂ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ 76ನೇ ಗಣರಾಜ್ಯೋತ್ಸವ ನಿಮಿತ್ತ ತಾಪಂ ಇಒ ಸಂತೋಷ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು.

ಸ್ವಾತಂತ್ರ್ಯ ನಂತರ ಭಾರತದಲ್ಲಿ ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಅವಕಾಶ ಸಂವಿಧಾನ ಕಲ್ಪಿಸಿದೆ. ಪ್ರತಿಯೊಬ್ಬರೂ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದ ನೈಜ ಆಶಯಗಳನ್ನು ಅರಿಯಬೇಕು ಎಂದು ತಾಪಂ ಇಒ ಸಂತೋಷ ಪಾಟೀಲ್ ಹೇಳಿದರು. ತಾಪಂ ಸಹಾಯಕ ನಿರ್ದೇಶಕ ಹನುಮಂತಗೌಡ ಪಾಟೀಲ್, ಕೆಡಿಪಿ ನಾಮನಿರ್ದೇಶನ ಸದಸ್ಯ ರಸುಲ್‌ಸಾಬ್ ದಮ್ಮೂರು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಟಿ.ಜೆ.ದಾನಿ, ಯೋಜನಾಧಿಕಾರಿ ಶಿವರಾಜ ಇತರರಿದ್ದರು.