ಬೆಂಗಳೂರು : ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಮಹಿಳೆ ವಿರುದ್ಧ ಸಪಂಗಿರಾಮನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎಸ್.ಆರ್.ನಗರ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ವೈ.ಜಗದೀಶ್, ದೂರು ನೀಡಿದ್ದಾರೆ. ಈ ಮೇರೆಗೆ ಆರೋಪಿ ಶಿವಾಜಿನಗರದ ನಫಿಸಾ ಖಾನ್ ಎಂಬಾಕೆ ವಿರುದ್ಧ ಎ್ಐಆರ್ ದಾಖಲಿಸಿ ತನಿಖೆ ಕೈಗೊಂಡಿರವುದಾಗಿ ಪೊಲೀಸರು ತಿಳಿಸಿದ್ದಾರೆ.
ಫೇಸ್‌ಬುಕ್ ಖಾತೆಯಲ್ಲಿ ನಫಿಸಾ ಖಾನ್ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಎಸ್.ಆರ್. ನಗರ ವಾರ್ಡ್‌ನಲ್ಲಿ ಕಸವನ್ನು ಸರಿಯಾಗಿ ವಿಲೇವಾರಿ ಮಾಡಲಾಗುತ್ತಿಲ್ಲ. ಇದಕ್ಕೆ ಕಾರಣ ಶಾಸಕ ರಿಜ್ವಾನ್ ಅರ್ಷದ್‌ಗೆ ಹಿಂದುಗಳು ಮತಚಲಾಯಿಸಿಲ್ಲ. ಅದಕ್ಕಾಗಿ ಮುಸ್ಲಿಂ ಇರುವ ಸ್ಥಳಗಳಲ್ಲಿ ಮಾತ್ರ ಕಸ ತೆಗೆಯುತ್ತಿದ್ದು, ಹಿಂದುಗಳ ನೆಲೆಸಿರುವ ಪ್ರದೇಶದಲ್ಲಿ ಕಸ ವಿಲೇವಾರಿ ಆಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಇದರಿಂದ ಹಿಂದು ಮತ್ತು ಮುಸ್ಲಿಂ ನಡುವಿನ ಕೋಮುಭಾವನೆ ಕೆರಳಿಸುವ ಯತ್ನ ನಡೆದಿದ್ದು, ಆರೋಪಿ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.