ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಾಪನೆಯಾಗಿ ಯಶಸ್ವಿಯಾಗಿ 50 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆಯ ಪ್ರಯುಕ್ತ, ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ಕಾರವಾರ ಹಾಗೂ ಮೆ. ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಹಾಗೂ ಪರ್ಯಾಯ ಮಾರ್ಗಗಳ ಕುರಿತಾಗಿ ಮೆ. ವೆಸ್ಟ್ ಕೋಸ್ಟ್ ಪೇಪರ್ ಮಿಲ್ಸ್ ಲಿಮಿಟೆಡ್‌ನಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವು ಗುರುವಾರ ನಡೆಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ಕಂಪನಿಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ ವಿವರಿಸಿದರು.
ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳನ್ನು (ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ, ಪ್ಲೆಕ್ಸ್, ಬಾವುಟ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಸ್ಟಾçಗಳು, ಕ್ಲಿಂಗ್ ಫಿಲ್ಮ್ ರಸ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೊಕಾಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್ಸನಿಂದ ತಯಾರಾದಂತಹ ವಸ್ತುಗಳು) ಉಪಯೋಗಿಸದಂತೆ ಜಾಗೃತಿ ಮೂಡಿಸಿ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉಪಯೋಗವನ್ನು ಸಂಪೂರ್ಣವಾಗಿ ನಿಷೇಧಿ ಬದಲಾಗಿ ಅಡಿಕೆ ಎಲೆ / ಕಟ್ಟಿಗೆ / ಗಾಜು / ಪೇಪರ್ / ಸ್ಟೀಲ್‌ನಿಂದ ತಯಾರಿಸಿದ ವಸ್ತುಗಳನ್ನು ಬಳಸುವಂತೆ ಮತ್ತು ಕೇವಲ ಬಟ್ಟೆ ಚೀಲಗಳನ್ನು ಬಳಸುವಂತೆ ಹಾಗೂ ಪ್ಲಾಸ್ಟಿಕ್ ಚೀಲಗಳನ್ನು ಬಳಸಿದಲ್ಲಿ ದಂಡವನ್ನು ವಿಧಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂಪನಿಯ ಅಧಿಕಾರಿ ರಾಜೇಂದ್ರ ಜೈನ, ಎಕ್ಸಿಕ್ಯೂಟಿವ್ ಡೈರೆಕ್ಟರ್ ಅನುಜ ಕುಮಾರ, ತಯಾಳ್, ಪ್ರೆಸಿಡೆಂಟ್ (Tech) ವೇಲು ವೆಂಕಟೇಶ, ವೈಸ್ ಪ್ರೆಸಿಡೆಂಟ್, ರಾಘವೇಂದ್ರ ಜೆ., ಡಿಜಿಎಮ್. ಸಾರ್ವಜನಿಕ ಸಂಪರ್ಕ ಅಧಿಕಾರಿ ರಮೇಶ ಎನ್, ಹಿರಿಯ ಮ್ಯಾನೇಜರ್ ಹಾಗೂ ಎಲ್ಲಾ ವಿಭಾಗದ ಖ್ಯಸ್ಥರು ಹಾಜರಿದ್ದರು.