ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣರವರನ್ನು ಅವರ ನಿವಾಸದಲ್ಲಿ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಹಿಂದೂ ಮಲಯಾಳಿ ಸಮಾಜ ಬಾಂಧವರ ಬೇಡಿಕೆಗಳಿಗೆ ಸ್ಪಂದಿಸುವುದಾಗಿ ಎ.ಎಸ್.ಪೊನ್ನಣ್ಣ ಭರವಸೆ ನೀಡಿದರು.
ಸನ್ಮಾನ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ.ವಿಜಯ, ಪ್ರಧಾನ ಕಾರ್ಯದರ್ಶಿ ಪಿ.ಕೆ.ಶಶಿಕುಮಾರ್, ಜಿಲ್ಲಾ ಹಿಂದೂ ಮಲಯಾಳಿ ಸಮಾಜದ ಸಲಹೆಗಾರ, ಟಿ.ಆರ್.ವಾಸುದೇವ್, ಟಿ.ಕೆ ಸುಧೀರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಸುನಿತಾ ಮಂಜುನಾಥ್, ವಿರಾಜಪೇಟೆ ಮಲಯಾಳಿ ಸಮಾಜದ ಅಧ್ಯಕ್ಷ ವಿನೂಪ್, ಕೆ.ಬಾಬು, ಪಿ.ಡಿ.ಪ್ರಕಾಶ್, ಕೆ.ವಿ.ಸುಬ್ರಮಣಿ, ಶರಂತ್ ಕಾಂತ್ ಹಾಗೂ ವಿವಿಧ ಭಾಗಗಳ ಹಿಂದೂ ಮಲಯಾಳಿ ಸಮಾಜದ ಪದಾಧಿಕಾರಿಗಳು ಇದ್ದರು.