ಮದ್ದೂರು ತಾಲೂಕಿನ ಬೆಸಗರಹಳ್ಳಿ ಗ್ರಾಮದ ಮಾರಿಕಾಂಬ ದೇವಾಲಯವನ್ನು ತಳಿರು ತೋರಣಗಳಿಂದ ಸಿಂಗಾರ ಮಾಡಿರುವುದು.  
ಜಿಲ್ಲೆ

ಮಾರಿಕಾಂಬ ದೇವಿಯ ಪೂಜಾ ಮಹೋತ್ಸವ

ಅಭಿನಯ್ ಎಚ್.ಎಂ

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮದಲ್ಲಿ ಶ್ರೀ ಮಾರಿಕಾಂಬ ದೇವಿಯ 12ನೇ ವರ್ಷದ ಪೂಜಾ ಮಹೋತ್ಸವ ಮಂಗಳವಾರ ಸಡಗರ ಮತ್ತು ಸಂಭ್ರಮದಿಂದ ನಡೆಯಿತು.

ಹಬ್ಬದ ಅಂಗವಾಗಿ ಗ್ರಾಮವನ್ನು ತಳಿರು -ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಜತೆಗೆ ದೇಗುಲವನ್ನು ಅಲಂಕಾರಗೊಳಿಸಲಾಗಿತ್ತು. ಗ್ರಾಮದ ಪ್ರಮುಖ ರಸ್ತೆಯಗಳಿಗೆ ದೀಪಾಲಂಕಾರ ಮಾಡಲಾಗಿತ್ತು. ಮಹಿಳೆಯರು ದೇವರಿಗೆ ತಂಬಿಟ್ಟಿನಾರತಿ ಮಾಡಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು.

ಮಾರಮ್ಮ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ವಿವಿಧ ಪೂಜಾ ಕೈಂಕರ್ಯ ಸಾಂಗವಾಗಿ ನೆರವೇರಿತು. ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಮೇ.15 ರ ಸಂಜೆ 6 ಗಂಟೆಗೆ ಹಬ್ಬದ ಅಂಗವಾಗಿ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇಗುಲದ ಪ್ರಧಾನ ಅರ್ಚಕ ಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.