ಮಲೇಬೆನ್ನೂರು: ಇಲ್ಲಿನ ನೀರಾವರಿ ಇಲಾಖೆಯ ಆವರಣದಲ್ಲಿ 2ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗಾಗಿ ಮಹಾಮಂಟಪ ನಿರ್ಮಾಣಕ್ಕೆ ಗೋ ಪೂಜೆ ಸಲ್ಲಿಸಿ, ಹಂದರ ಕಂಬಕ್ಕೆ ಪೂಜೆ ಸಲ್ಲಿಸಿ ಶಾಸಕ ಬಿ.ಪಿ. ಹರೀಶ್ ಭಾನುವಾರ ಚಾಲನೆ ನೀಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 2ನೇ ವರ್ಷದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಮಾಡಲು ಮುಂದಾಗಿರುವುದು ಸಂತಸದ ವಿಷಯ. ಎಲ್ಲರೂ ಶಾಂತಿಯುತವಾಗಿ ಹಬ್ಬ ಆಚರಿಸಬೇಕೆಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ, ಬಿಜೆಪಿ ಮುಖಂಡ ಚಂದ್ರಶೇಖರ್ ಪೂಜಾರ್, ಜಿಪಂ ಮಾಜಿ ಸದಸ್ಯ ಬೆಣ್ಣೆಹಳ್ಳಿ ಹಾಲೇಶಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಜಿ. ಮಂಜುನಾಥ್ ಮಾತನಾಡಿದರು. ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್, ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಸಮಿತಿ ಅಧ್ಯಕ್ಷ ಯರೇಚಿಕ್ಕನಹಳ್ಳಿ ಚಂದ್ರಶೇಖರ್, ಮುಖಂಡರಾದ ಐರಣಿ ಅಣ್ಣಪ್ಪ, ಕೆ.ಪಿ. ಗಂಗಾಧರ್, ಪಿ.ಆರ್. ರಾಜು, ಪಿ.ಎಸ್. ಕುಮಾರ, ಓ.ಜಿ. ಕುಮಾರ್, ಜಿಗಳೇರ ಹಾಲೇಶಪ್ಪ ಮತ್ತಿತರರಿದ್ದರು.