ಜಿಲ್ಲೆ

ಕಾವೇರಿ ಮಾತೆಗೆ ಹುಣ್ಣಿಮೆ ಪೂಜೆ

ಸುನಿಲ್ ಪೊನ್ನೇಟಿ

ಕುಶಾಲನಗರ :

ಇಲ್ಲಿನ ಕೊಪ್ಪ ಗೇಟ್ ಬಳಿ ಇರುವ ಕಾವೇರಿ ಪ್ರತಿಮೆಗೆ ಹುಣ್ಣಿಮೆ ಅಂಗವಾಗಿ ಈಚೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ಏರ್ಪಡಿಸಿದ್ದ ಕಾರ ಹುಣ್ಣಿಮೆಯ ಅಂಗವಾಗಿ ಏರ್ಪಡಿಸಿದ್ದ ವಿಶೇಷ ಪೂಜೆಗೆ ಗಡಿಭಾಗದ ಕಾವೇರಿ ದೇಗುಲದಲ್ಲಿ ಅಧಿಕ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಕಾವೇರಿ ಭಕ್ತರ ಸಮ್ಮುಖದಲ್ಲಿ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು.  ಈ ವೇಳೆ ಕಾವೇರಿ ಪ್ರತಿಮೆಗೆ ಹಾಲು, ತುಪ್ಪ, ಅರಿಸಿನ, ಕುಂಕುಮಗಳಿಂದ ಅಭಿಷೇಕ ಮಾಡಲಾಯಿತು.

ಅರ್ಚಕ ಪುರುಷೋತ್ತಮ್ ಭಟ್ ನೇತೃತ್ವದಲ್ಲಿ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಮಹಾ ಮಂಗಳಾರತಿ ನೆರವೇರಿಸಲಾಯಿತು. ಸಮಾಜದ ಸೇವಕರಾದ ರೇಖಾ ನಟರಾಜ್, ಕುಟುಂಬಸ್ಥರು ಪೂಜಾ ಸೇವಾರ್ಥ ನೆರವೇರಿಸಿದರು. ಸುನಂದಾ ಕೌಶಿಕ್ ಕಾವೇರಿ ಮಾತೆಗೆ ವಸ್ತ್ರ ವಿತರಿಸಿದರು.

ಈ ವೇಳೆ ಮಾತನಾಡಿದ ನಟರಾಜ್, ನದಿ ತೀರದ ನಿವಾಸಿಗಳು ಮತ್ತು ಸಾರ್ವಜನಿಕರು ನದಿಯ ಪಾವಿತ್ರ್ಯತೆಗೆ ಧಕ್ಕೆ ಭಾರದಂತೆ ಜಾಗೃತಿ ವಹಿಸಬೇಕು. ನದಿಯ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಇತ್ತೀಚಿನ ದಿನಗಳಲ್ಲಿ ಪ್ರಮುಖವಾಗಿ ಮೂಲದಲ್ಲಿಯೇ ಕಾವೇರಿ ಕಲುಷಿತಗೊಂಡು ಹರಿಯುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ. ಬಾರವಿ ಕನ್ನಡ ಅಭಿಮಾನಿಗಳ ಸಂಘದ ವತಿಯಿಂದ ನದಿ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸುತ್ತಿರುವ ಶ್ಲಾಘನೀಯ ಎಂದರು. ನಂತರ ನೆರೆದಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಬಾರವಿ ಕನ್ನಡ ಅಭಿಮಾನಿ ಸಂಘದ ಅಧ್ಯಕ್ಷ ಬಬಿಂದ್ರ ಪ್ರಸಾದ್, ಮುಖಂಡರಾದ ವಿಜಯೇಂದ್ರ ಪ್ರಸಾದ್, ಸೋಮಶೇಖರ್, ಚಂದ್ರು, ರುದ್ರ, ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.