ಜಿಲ್ಲೆ

ಪೂಜ್ಯ ಶರಣಬಸವಪ್ಪ ಅಪ್ಪಾಜಿ ಚೇತರಿಕೆ : ಆರೋಗ್ಯ ವಿಚಾರಿಸಿದ ಸಚಿವರು; ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ

ಬಾಬುರಾವ ಯಡ್ರಾಮಿ

ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ದೂರವಾಣಿಯ ಮುಖಾಂತರ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮಾತನಾಡಿ ಪೂಜ್ಯ ಡಾ. ಅಪ್ಪಾಜಿಯವರ ಆರೋಗ್ಯದ ಬಗ್ಗೆ ವಿಚಾರಿಸಿ, ಅವರ ಚೇತರಿಕೆಯ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ೮ನೇ ಮಹಾದಾಸೋಹ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಆರೋಗ್ಯ ಸ್ಥಿತಿ ಸಾಮಾನ್ಯವಾಗಿದ್ದು, ಕೆಲವು ದಿನಗಳ ಹಿಂದೆ ಉಸಿರಾಟದ ಸೋಂಕಿನ ದೂರುಗಳಿಂದಾಗಿ ಅವರು ದಾಖಲಾಗಿದ್ದ ಖಾಸಗಿ ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅವರನ್ನು ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ.

ಮಂಗಳವಾರದ0ದು ಗ್ರಾಮೀಣಾಭಿವೃದ್ಧಿ ಸಚಿವ  ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್,  ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್‌ಸಿ ತಿಪ್ಪಣ್ಣ ಕಮಕನೂರ್ ಮತ್ತು ಕಾಂಗ್ರೆಸ್ ಪಕ್ಷದ ಇತರ ಹಿರಿಯ ನಾಯಕರು Chirayu ಆಸ್ಪತ್ರೆಗೆ ಭೇಟಿ ನೀಡಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರನ್ನು ಭೇಟಿ ಮಾಡಿ ವೈದ್ಯರು ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಅವರೊಂದಿಗೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. ಇಬ್ಬರೂ ಸಚಿವರು ಡಾ. ಅಪ್ಪಾಜಿ ಮತ್ತು ಮಾತೋಶ್ರೀ ಡಾ. ಅವ್ವಾಜಿ ಅವರೊಂದಿಗೆ ೧೦ ನಿಮಿಷಗಳಿಗೂ ಹೆಚ್ಚು ಸಮಯ ಕಳೆದರು ಮತ್ತು ಪೂಜ್ಯ ಡಾ. ಅಪ್ಪಾಜಿ ಅವರ ಆರೋಗ್ಯ ಚೇತರಿಕೆಯ ಬಗ್ಗೆ ತಿಳಿದು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದರು.

ಅದೇ ಸಮಯದಲ್ಲಿ, ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ದೂರವಾಣಿಯ ಮುಖಾಂತರ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮಾತನಾಡಿ ಪೂಜ್ಯ ಡಾ. ಅಪ್ಪಾಜಿಯವರ ಆರೋಗ್ಯದ ಬಗ್ಗೆ ವಿಚಾರಿಸಿ, ಅವರ ಚೇತರಿಕೆಯ ಬಗ್ಗೆ ತಿಳಿದು ಹರ್ಷ ವ್ಯಕ್ತಪಡಿಸಿದರು.

ಪೂಜ್ಯ ಡಾ. ಅಪ್ಪಾಜಿ ಅವರನ್ನು ಉಸಿರಾಟದ ಸೋಂಕಿನ ದೂರುಗಳೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ೨೪ ಗಂಟೆಗಳ ಒಳಗೆ ಸಾಮಾನ್ಯ ಸ್ಥಿತಿಗೆ ಮರಳಿದೆ. ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಇರಿಸಲಾಗಿದ್ದು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್. ಡಿ. ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪೂಜ್ಯ ಡಾ. ಅಪ್ಪಾಜಿ ಅವರನ್ನು ಭೇಟಿ ಮಾಡಿ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರೊಂದಿಗೆ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು. ಈ ಸಂದರ್ಭದಲ್ಲಿ ಡಾ. ಉಮಾದೇವಿ ದೇಶಮುಖ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಡೀನ್ ಡಾ. ಲಕ್ಷಿö್ಮÃ ಪಾಟೀಲ್ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ್ ಮಾಕಾ, ಶರಣಬಸವೇಶ್ವರ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ನಂದಗಾoವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.