ಕನಕಗಿರಿಯ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಪೆ ಆಹಾರ ಪದಾರ್ಥಗಳನ್ನು ಮುಖಂಡರು ಪದರ್ಶನ ಮಾಡಿದರು. ಪಪಂ ಸದಸ್ಯ ಶೇಷಪ್ಪ, ಶಾಸಕರ ಮಾದರಿಯ ಹಿಪ್ರಾ ಶಾಲೆಯ ಎಸ್‌ಡಿಎಂಸಿ ಸದಸ್ಯರಾದ ಹನುಮಂತರೆಡ್ಡಿ, ಭೀಮೇಶ, ಪ್ರಗತಿ ಪರ ಸಂಘಟನೆಗಳ ಪದಾಧಿಕಾರಿಗಳಾದ ಪಾಮಣ್ಣ ಅರಳಿಗನೂರು, ವೆಂಕಟೇಶ ಇತರರಿದ್ದರು. 
ಜಿಲ್ಲೆ

ಬಿಸಿಯೂಟಕ್ಕೆ ಕಳಪೆ ಆಹಾರ ಪೂರೈಕೆ ಸಲ್ಲ

ಗಾಯತ್ರಿ ಮಾಲಿಪಾಟೀಲ್

ಕನಕಗಿರಿ: ತಾಲೂಕಿನಾದ್ಯಂತ ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕಾಗಿ ಕಳಪೆ ಆಹಾರ ಸರಬರಾಜು ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಸದಸ್ಯರು, ಪ್ರಗತಿ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪಪಂ ಸದಸ್ಯ ಶೇಷಪ್ಪ ಆಗ್ರಹಿಸಿದ್ದಾರೆ.

ನಗರದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಬಿಸಿಯೂಟಕ್ಕೆ ಪೂರೈಕೆಯಾಗಿರುವವ ಬೇಳೆ, ಗೋಧಿ ಕಳಪೆಯಿಂದ ಕೂಡಿವೆ. ಕಳಪೆ ಗುಣಮಟ್ಟದ ಪದಾರ್ಥಗಳ ಅಡುಗೆಯಿಂದ ಮಕ್ಕಳಿಗೆ ತೊಂದರೆಯಾದರೆ ಯಾರು ಹೊಣೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಕಳೆದ ಮೂರು ತಿಂಗಳ ಹಿಂದೆ ಬಂದಿರುವ ರೇಷನ್ ಸೋಮವಾರ ಪೂರೈಕೆಯಾಗಿದೆ. ಕಳಪೆ ಆಹಾರ ಪೂರೈಕೆಯಲ್ಲಿ ಅಧಿಕಾರಿಗಳು, ಗುತ್ತಿಗೆದಾರರು ಶಾಮೀಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದುನ ಒತ್ತಾಯಿಸಿದರು. ಅಲ್ಲದೇ, ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮುಖ್ಯಮಂತ್ರಿ, ಶಿಕ್ಷಣ ಮಂತ್ರಿಗಳಿಗೆ ಕಳುಹಿಸಲಾಗುವುದು ಎಂದರು.

ಪಟ್ಟಣದಲ್ಲಿ ಹಲವು ಶಿಕ್ಷಕರು ಶಾಲೆಯಿಂದ ಹೊರಗುಳಿಯುತ್ತಿದ್ದು, ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತವಾಗಲು ಕಾರಣವಾಗುತ್ತಿದೆ. ಈ ಬಗ್ಗೆ ಕ್ರಮವಹಿಸುವಂತೆ ಸಿಆರ್‌ಪಿ ಮಹೇಶ ಅವರಿಗೆ ಒತ್ತಾಯಿಸಿದರು ಪಪಂ ಸದಸ್ಯ ಶೇಷಪ್ಪ ಪೂಜಾರ, ಎಸ್‌ಡಿಎಂಸಿ ಸದಸ್ಯರಾದ ಹನುಮಂತರೆಡ್ಡಿ, ಭೀಮೇಶ, ಪ್ರಗತಿಪರ ಸಂಘಟನೆಯ ಪಾಮಣ್ಣ ಅರಳಿಗನೂರು, ವೆಂಕಟೇಶ ನಿರ್ಲೂಟಿ, ನಿಂಗಪ್ಪ ಮ್ಯಾಗಡೆ ಇತರರಿದ್ದರು.