ಗಂಗಾವತಿ ತಾಲೂಕಿನ ಆನೆಗೊಂದಿ ಶ್ರೀ ವೀರಭದ್ರೇಶ್ವರ ದೇವಾಲಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಆಯೋಜಿಸಿದ್ದ ಕಣ್ಣು ತಪಾಸಣೆ ಉಚಿತ ಶಿಬಿರದಲ್ಲಿ ಜನರ ಕಣ್ಣು ತಪಾಸಿಸಲಾಯಿತು. ಐಕೇರ್ ಸಂಸ್ಥೆ ವೈದ್ಯಾಧಿಕಾರಿ ಡಾ. ಸಿ.ಎಂ.ಚೇತನ್, ಟ್ರಸ್ಟ್ ಮೇಲ್ವಿಚಾರಕ ನೀಲರಾಜ್ ಇತರರಿದ್ದರು. 
ಜಿಲ್ಲೆ

ಬಡವರ ಆರೋಗ್ಯ ರಕ್ಷಣೆಗೆ ಆದ್ಯತೆ

Kopala - Desk - Eraveni

ಗಂಗಾವತಿ: ತಾಲೂಕಿನ ಆನೆಗೊಂದಿ ಶ್ರೀ ವೀರಭದ್ರೇಶ್ವರ ದೇವಾಲಯ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್‌ನಿಂದ ಕಣ್ಣು ತಪಾಸಣೆ ಉಚಿತ ಶಿಬಿರ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಆನೆಗೊಂದಿಯ ವೀರಶೈವ ಸಮಾಜದ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಶಿಬಿರದಲ್ಲಿ 80ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿ ಚಿಕಿತ್ಸೆಗೆ ಸಲಹೆ ನೀಡಲಾಯಿತು. ನಂತರ ಔಷಧವನ್ನು ಉಚಿತವಾಗಿ ವಿತರಿಸಲಾಯಿತು.

ಮೇಲ್ವಿಚಾರಕ ಬಿ.ನೀಲರಾಜ್ ಮಾತನಾಡಿ, ಬಡ ಜನರ ಆರ್ಥಿಕಾಭಿವೃದ್ಧಿಯ ಬಗ್ಗೆ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಲಾಗುತ್ತಿದೆ. ಟ್ರಸ್ಟ್‌ನಿಂದ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಐ ಕೇರ್ ಸಂಸ್ಥೆ ವೈದ್ಯಾಧಿಕಾರಿ ಡಾ.ಸಿ.ಎಂ.ಚೇತನ್, ವೈದ್ಯ ಡಾ.ವಿ.ಎಸ್.ಎನ್.ಬಿ.ರಾಯಲು, ವೀರಶೈವ ಸಮಾಜದ ಮುಖಂಡ ಡಾ.ಎಸ್.ವಿ.ಹಿರೇಮಠ, ಯುವ ಸಂಘಟನೆ ಪ್ರತಿನಿಧಿ ಹರಿಹರದೇವರಾಯಲು, ಉಪನ್ಯಾಸಕ ಕೆ.ಬಸಪ್ಪ ಇತರರಿದ್ದರು.