ಜಿಲ್ಲೆ

ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ವಿಗ್ರಹ ಮಾರಾಟ ಕಾನೂನು ಕ್ರಮಕ್ಕೆ ಸೂಚನೆ

ದಾವಣಗೆರೆ: ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ಮಾಡಿರುವ ಹಾಗೂ ಬಣ್ಣಲೇಪಿತ ಗಣಪತಿ ವಿಗ್ರಹಗಳ ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಟಾಪಿಸಿ ನೀರಿನ ಮೂಲಗಳಲ್ಲಿ ವಿಸರ್ಜನೆ ಮಾಡಲಾಗುತ್ತದೆ. ಆದರೆ, ಇದರಿಂದ ಆಗುವ ಜಲಮಾಲಿನ್ಯ ನಿಯಂತ್ರಿಸಲು ಪ್ಲಾಸ್ಟರ್ ಆಫ್ ಪ್ಯಾರೀಸ್‌ನಿಂದ ತಯಾರಿಸಿರುವ ಹಾಗೂ ಬಣ್ಣಲೇಪಿತ ಮೂರ್ತಿಗಳನ್ನು ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.