ತಿ.ನರಸೀಪುರ : ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನಿವಾರಣೆ ಮಾಡಲು ಹಾಗೂ ಪೋಷಕಾಂಶಗಳುಳ್ಳ ಆಹಾರಗಳ ಬಗ್ಗೆಯೂ ಜಾಗೃತಿ ಮೂಡಿಸಲು ಪೋಷಣ್ ಅಭಿಯಾನ ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೋವಿಂದರಾಜು ಹೇಳಿದರು.
ತಾಲೂಕಿನ ಚಿದರವಳ್ಳಿ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಪೋಷಣ್ ಅಭಿಯಾನ, ರಾಷ್ಟ್ರೀಯ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ
ಚಿದರವಳ್ಳಿ ವೃತ್ತದ ಕಾರ್ಯಕರ್ತೆಯರು ಆಯೋಜಿಸಿದ್ದ ಫೋಷಣ್ ಮಾಸಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅಂಗನವಾಡಿಗಳಲ್ಲಿ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಪೌಷ್ಟಿಕ ಯುಕ್ತ ಆಹಾರವನ್ನು ಸೇವನೆ ಮಾಡಬೇಕು. ಉತ್ತಮ ಆರೋಗ್ಯವನ್ನ ಹೊಂದಬೇಕು ಎಂದು ಸಲಹೆ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮುತ್ತುಕೃಷ್ಣ ಮಾತನಾಡಿದರು.