ಕಳೆದ ಒಂದು ವಾರದಿಂದ ಬಿಸಿಲ ತಾಪ ಏರುತ್ತಲೇ ಇದ್ದು, ಪಟ್ಟಣಗಳಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರು ನೆರಳಿಗಾಗಿ ಛತ್ರಿ ಬಳಸಿರುವುದು. (ಸಾಂದರ್ಭಿಕ ಚಿತ್ರ) 
ಜಿಲ್ಲೆ

2 ದಿನ ಬಿಸಿಗಾಳಿ ಬೀಸುವ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​​

ಬೆಂಗಳೂರು:ಬೇಸಿಗೆ ಆರಂಭದಲ್ಲೇ ಸುಡು ಬಿಸಿಲಿನ ಬೇಗೆಗೆ ಕರಾವಳಿ ಭಾಗದ ಜಿಲ್ಲೆಗಳು ತತ್ತರಿಸಿವೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 2 ದಿನ ಬಿಸಿಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ.

ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಭಾಗದಲ್ಲಿ ಉಷ್ಣಾಂಶ ಅಧಿಕವಾಗಿದೆ. ಕಾರವಾರ 38.4, ಪಣಂಬೂರು 38.3, ಹೊನ್ನಾವರ 38.2 ಮತ್ತು ಮಂಗಳೂರು ವಿಮಾನ ನಿಲ್ದಾಣ 37 ಡಿ.ಸೆ. ಉಷ್ಣಾಂಶ ಗುರುವಾರ ದಾಖಲಾಗಿದೆ. ಈ ಮೇಲಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ 4-5 ಡಿ.ಸೆ.ಅಧಿಕವಾಗಿ ವರದಿಯಾಗುತ್ತಿದೆ. ಹಾಗಾಗಿ, ಆ ಭಾಗದ ಜನರು ಬಿಸಿಲಿನ ಪ್ರಖರತೆ ಹೆಚ್ಚಿರುವ ಸಂದರ್ಭದಲ್ಲಿ ಹೊರಗಡೆ ತೆರಳವುದನ್ನು ತಪ್ಪಿಸಬೇಕು. ಶಿಶುಗಳು, ವೃದ್ಧರು ಮತ್ತುರ್ದಿಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಶಾಖದ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ಕೊಟ್ಟಿದೆ.

ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಮುಂದಿನ 5 ದಿನ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.ಮುಂದಿನ ಮೂರು ದಿನ ಉತ್ತರ ಕರ್ನಾಟಕದ ಭಾಗದ ಬಹುತೇಕ ಜಿಲ್ಲೆಗಳ ತಾಪಮಾನದಲ್ಲಿ 2-3 ಡಿ.ಸೆ.ಹೆಚ್ಚಳವಾಗುವ ಸಾಧ್ಯತೆ ಇದೆ.