ಮಂಗಳೂರು : ಭಾರತೀಯ ಅಂಚೆ ಇಲಾಖೆಯು ಅಂಚೆ ಚೀಟಿ ಮೂಲಕ ಚಾರಿತ್ರಿಕ ಮಹತ್ವವನ್ನು ದಾಖಲಿಸಿ ದೇಶ ವಿದೇಶಗಳಲ್ಲಿ
ಪಸರಿಸಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮದ ನೆನಪಿಗಾಗಿ ಸಂಘದ ಲೋಗೊ ಒಳಗೊಂಡ ವಿಶೇಷ ಅಂಚೆ
ಚೀಟಿಯನ್ನು ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಅಂಚೆ ಇಲಾಖೆ ಈಗ ಆರೋಗ್ಯ ಸುರಕ್ಷಾ ವಿಮಾ ಯೋಜನೆ ಸಹಿತ ವಿವಿಧ ಸೇವಾ ಸೌಲಭ್ಯಗಳನ್ನು ನೀಡುತ್ತಿದೆ.ಮೈ ಸ್ಟಾೃಂಪ್ ಯೋಜನೆ ಮೂಲಕ ವಿವಿಧ ಸಂಘ ಸಂಸ್ಥೆಗಳಿಗೆ ಅಂಚೆ ಚೀಟಿ ಬಿಡುಗಡೆ ಮಾಡಲು ಅವಕಾಶ ಕಲ್ಪಿಸಿದೆ ಎಂದು ಅವರು ಹೇಳಿದರು. ಜಿಲ್ಲಾ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ವಾರ್ತಾಧಿಕಾರಿ ಖಾದರ್ ಷಾ , ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ
ಮಹಾರಾಷ್ಟ್ರ ಘಟಕದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ , ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ,ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ, ಆರ್.ರಾಮಕೃಷ್ಣ ಉಪಸ್ಥಿತರಿದ್ದರು.
ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.