ದೇವನಹಳ್ಳಿಯ ಜಿಲ್ಲಾಡಳಿತಭವನದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಪೋಸ್ಟರ್ ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ, ಅಪರ ಜಿಲ್ಲಾಧಿಕಾರಿ ಅಮರೇಶ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು. 
ಜಿಲ್ಲೆ

ಹಾಲುಣಿಸುವ ಬಗ್ಗೆ ಜನಜಾಗೃತಿ ಮೂಡಿಸಿ

ಶಿವರಾಜ.ಎಂ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಗು ಜನಿಸಿದ ಒಂದು ಗಂಟೆಯ ಒಳಗೆ ತಾಯಿಯ ಎದೆ ಹಾಲು ಕುಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಎದೆ ಹಾಲುಣಿಸುವುದರಿಂದ ಮಗುವಿನ ಆರೋಗ್ಯ ಹಾಗೂ ತಾಯಿಯ ಆರೋಗ್ಯ ಕಾಪಾಡಿಕೊಳ್ಳಬಹುದು. ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಕ್ರಮ ರೂಪಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ದೇವನಹಳ್ಳಿಯ ಜಿಲ್ಲಾಡಳಿತಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ 2024ರ ಕಾರ್ಯಕ್ರಮದಲ್ಲಿ ಪೋಸ್ಟ್ ಬಿಡುಗಡೆ ಮಾಡಿ ಮಾತನಾಡಿದರು.
ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯವಾಗಿದ್ದು ಇದರ ಅಂಗವಾಗಿ ಪೋಸ್ಟರ್ ಬಿಡುಗಡೆಗೊಳಿಸಲಾಯಿತು ಎಂದು ತಿಳಿಸಿದರು.ಮಗು ಜನಿಸಿದ ಮೊದಲ ಆರು ತಿಂಗಳ ಕಾಲ ತಾಯಿ ಹಾಲು ನೀಡುವುದನ್ನು ಉತ್ತೇಜಿಸುವ ಗುರಿಯೊಂದಿಗೆ 1991ರಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆರಂಭಿಸಲಾಯಿತು. ಸ್ತನ್ಯಪಾನದಿಂದ ಆರೋಗ್ಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ನ್ಯುಮೋನಿಯಾ ಸೇರಿ ಪ್ರಾಣಾಂತಿಕ ರೋಗಗಳಿಂದ ರಕ್ಷಣೆ ನೀಡುತ್ತದೆ ಮತ್ತು ಮಗುವಿನ ಬೆಳವಣಿಗೆಯನ್ನು ಅಭಿವೃದ್ಧಿಪಡಿಸುತ್ತದೆ ಎಂದು ಹೆಳಿದರು. ಈ ಸಪ್ತಾಹವು ವಾರ್ಷಿಕ ಆಚರಣೆಯಾಗಿದ್ದು, ಇದನ್ನು ಪ್ರತಿವರ್ಷ ಆ.1 ರಿಂದ 7 ರವರೆಗೆ ನಡೆಸಲಾಗುತ್ತದೆ. ಇದರಿಂದ ಗ್ರಾಮೀಣ ಭಾಗದ ಮಹಿಳೆಯರಿಗೆ ಎದೆ ಹಾಲಿನ ಮಹತ್ವ ತಿಳಿಯುತ್ತದೆ ಎಂದು ಹೆಳಿದರು.
ಅಮೃತಕ್ಕೆ ಸಮಾನ:

ಜಾಗೃತಿ ಕಾರ್ಯಕ್ರಮ:
ಮೊದಲ ಹೆರಿಗೆಯ ಬಳಿಕ ತಾಯಂದಿರಿಗೆ ಹಾಲುಣಿಸುವ ಪ್ರಕ್ರಿಯೆ ಬಗ್ಗೆ ತಿಳಿದಿರುವುದಿಲ್ಲ. ಮಕ್ಕಳಿಗೆ ಎದೆಹಾಲು ಮುಖ್ಯವಾಗಿರುವುದರಿಂದ ತಾಯಿಂಯದಿರು ತಿಳಿದುಕೊಳ್ಳುವುದು ಮುಖ್ಯ ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಸೀಮಾ ರುದ್ರಪ್ಪ ಮಹಾಬಳೆ ತಿಳಿಸಿದರು. ಹೀಗಾಗಿ ಈ ದಿನವು ಸ್ತನ್ಯಪಾನದ ಪ್ರಾಮುಖ್ಯತೆಯನ್ನು ತಿಳಿಸುತ್ತದೆ ಮತ್ತು ಮಹಿಳೆಯರಿಗೆ ತಮ್ಮ ಮಗುವಿಗೆ ನಿರ್ದಿಷ್ಟ ಅವಧಿಯವರೆಗೆ ಹಾಲುಣಿಸಲು ಉದ್ದೇಶದ ಬಗ್ಗೆ ಅರಿವು ಮೂಡಿಸುತ್ತದೆ ಅದಲ್ಲದೇ ಈ ಸಪ್ತಾಹದಲ್ಲಿ ತಾಯಿ ಹಾಲಿನ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವುದು ಹಾಗೂ ಮಗುವಿನ ಬೆಳವಣಿಗೆಗೆ ತಾಯಿಯ ಹಾಲು ಎಷ್ಟು ಮುಖ್ಯ ಎನ್ನುವ ಬಗ್ಗೆ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.