ದೇವನಹಳ್ಳಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸಿ ಡಾ.ಎನ್.ಶಿವಶಂಕರ್ ಪೋಸ್ಟರ್ ಬಿಡುಗಡೆ ಮಾಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲ್ ಕುಮಾರ, ವಿಶ್ವಸಂಸ್ಥೆಯ ಸರ್ವೆಕ್ಷಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ. ಹೇಮಾವತಿ ಇದ್ದರು. 
ಜಿಲ್ಲೆ

ಆಂದೋಲನ ಪೋಸ್ಟರ್ ಬಿಡುಗಡೆ

ಶಿವರಾಜ.ಎಂ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನ.4 ರಿಂದ 21ರ ವರೆಗೆ ನಡೆಯಲಿರುವ ’ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್‌ನ್ನು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆ ಮಾಡಿದರು.ಜಿಲ್ಲೆಯಾದ್ಯಂತ ಕುಷ್ಠರೋಗ ಲಕ್ಷಣ ಕಂಡು ಬರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಅಭಿಯಾನ ನಡೆಯಲ್ಲಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಕುಷ್ಠರೋಗದ ಲಕ್ಷಣಗಳ ಬಗ್ಗೆ ಅರಿವು ಮೂಡಿಸುವ ಜತೆಗೆ ರೋಗಗಳ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.