ಜಿಲ್ಲೆ

ವ್ಯಕ್ತಿತ್ವ ವೃದ್ಧಿಗೆ ಸ್ನಾತಕೋತ್ತರ ಶಿಕ್ಷಣ ಅವಶ್ಯ

ಇಂದಿರಾ ಎನ್ ಕೆ

ಹೆಬ್ರಿ: ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸಲು ಅಗತ್ಯವುಳ್ಳ ವ್ಯಕ್ತಿತ್ವ ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸ್ನಾತಕೋತ್ತರ ಶಿಕ್ಷಣ ಇಂದು ಅತ್ಯಗತ್ಯ ಎಂದು ಕಾಪು ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಟಿ.ಜಿ.ಭಟ್ ಹೇಳಿದರು.

ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ನೂತನ ವಿದ್ಯಾರ್ಥಿಗಳ ಫ್ರೆಶರ್ಸ್ ಡೇ ಉದ್ಘಾಟಿಸಿ ಮಾತನಾಡಿದರು. ಪ್ರಾಧ್ಯಾಪಕ ಪ್ರೊ.ರವಿರಾಜ್ ಶೆಟ್ಟಿ ಇದ್ದರು. ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಎಚ್. ಅಧ್ಯಕ್ಷತೆ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಲಿತಿನ್ ಬಿ.ಎಂ., ನಂದೀಶ್‌ಕುಮಾರ್ ಕೆ.ಸಿ., ರವಿಚಂದ್ರ ಬಾಯರಿ ಕೆ., ವಿಠ್ಠಲ ಇದ್ದರು. ಡಾ.ಸೌಮ್ಯಲತಾ ಪಿ.ಸ್ವಾಗತಿಸಿದರು. ಶ್ರೀಲತಾ ವಂದಿಸಿದರು. ರಚನಾ ನಿರೂಪಿಸಿದರು.