ಜಿಲ್ಲೆ

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

Belagavi

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಯುವಕರ ಮಧ್ಯೆ ಮಾರಾಮಾರಿ ನಡೆದಿದ್ದು, ಯುವಕನೋರ್ವ ಗಾಯಗೊಂಡಿರುವ ಘಟನೆ ಪ್ರಕಾಶ ಚಿತ್ರಮಂದಿರ ಬಳಿ ಶನಿವಾರ ತಡರಾತ್ರಿ ನಡೆದಿದೆ.

ಪವನ ಜಕ್ಕಣ್ಣವರ (32) ಎಂಬುವರು ಗಾಯಗೊಂಡದ್ದು, ಸ್ಥಳೀಯರಾದ ಗೋಪಿ ಕಡೇಮನಿ, ಪದ್ಮರಾಜ ಕಡೇಮನಿ ಎಂಬುವರು ಹಲ್ಲೆ ಮಾಡಿದ್ದಾರೆ. ರಸ್ತೆ ಮೇಲೆ ಬೈಕ್ ಪಾರ್ಕ್ ಮಾಡಿದ ವಿಷಯಕ್ಕೆ ಹಲ್ಲೆ ನಡೆದಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಾರ್ಕೆಟ್ ಠಾಣೆ ಪೊಲೀಸರು ತಿಳಿಸಿದ್ದಾರೆ.