ಶ್ರೀರಂಗಪಟ್ಟಣ: ತಾಲೂಕು ವ್ಯಾಪ್ತಿಯ ತರಿಪುರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಜೂ.18ರಂದು ತ್ರೈಮಾಸಿಕ ನಿರ್ವಾಹಣ ಕಾರ್ಯ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೊಂತಗಹಳ್ಳಿ, ಹಂಪಾಪುರ, ಹೆಬ್ಬಾಡಿ, ಹೆಬ್ಬಾಡಿಹುಂಡಿ, ಹೊಸೂರು, ಮೇಳಾಪುರ, ಚಿಕ್ಕ ಅಂಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹದೇವಪುರ, ಚನ್ನಹಳ್ಳಿ, ಬಿದರಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಜೂ.19ರಂದು ಅರಕೆರೆ ಮತ್ತು ಗಾಮನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಕಾರಣ ಅಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಸಂಪೂರ್ಣ ಅರಕೆರೆ ಹೋಬಳಿ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಶ್ರೀರಂಗಪಟ್ಟಣ ಉಪ-ವಿಭಾಗದ ಎಇಇ ಮಂಜುನಾಥ್ ಪ್ರಸಾದ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.