ಜಿಲ್ಲೆ

ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ನಾಗೇಶ ಎಸ್

ಗಂಧನಹಳ್ಳಿ: ಸಾಲಿಗ್ರಾಮ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಹರದನಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರ ಹೊಮ್ಮುವ ಫೀಡರ್‌ಗಳ ತ್ರೈಮಾಸಿಕ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಸೆ.12ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಹರದನಹಳ್ಳಿ, ಶೀಗೇವಾಳು, ಹೊನ್ನೇನಹಳ್ಳಿ, ಹನಸೋಗೆ ಹಾಗೂ ಚನ್ನಂಗೆರೆ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಾಲಿಗ್ರಾಮ ಉಪ ವಿಭಾಗದ ಸೆಸ್ಕ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ.