ಧಾರವಾಡ: ತಡಸಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 29ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತೆ ಮಾಸಿಕ ತುರ್ತುಪಾಲನಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಅಂದು ಬೆಳೆಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ತಡಸಿನಕೊಪ್ಪ, ಜೋಗೆಲ್ಲಾಪುರ, ಇಟ್ಟಿಗಟ್ಟಿ, ಕೆಎಚ್ಬಿ, ಉದಯಗಿರಿ, ವನಸಿರಿನಗರ, ರಾಜಾಜಿನಗರ, ಸತ್ತೂರ, ಆಶ್ರಯ ಕಾಲನಿ, ಎನ್ಜಿಇಎ್, ಎಸ್ಡಿಎಂ ಮೆಡಿಕಲ್ ಕಾಲೇಜು, ನವಲೂರ, ಸಂಜೀವಿನಿ ಪಾರ್ಕ್, ರಾಯಾಪುರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.